transfer

ವರ್ಗಾವಣೆ ಕಮಿಷನ್ ದರಪಟ್ಟಿ: ಸದನದಲ್ಲಿ ಸ್ಪೀಕರ್ ಗೆ ದಾಖಲೆ ಸಲ್ಲಿಸಿದ ಎಚ್.ಡಿ ಕುಮಾರಸ್ವಾಮಿ
ಹೊಸ ಸರ್ಕಾರದಲ್ಲಿ ವರ್ಗಾವಣೆ ದಂಧೆಯ ಗುರುತರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.

ವಿಧಾನಸಭೆಯಲ್ಲಿ ವರ್ಗಾವಣೆ ಕಿಚ್ಚು: ಕಾಂಗ್ರೆಸ್-ಬಿಜೆಪಿ ನಡುವೆ 'ವ್ಯಾಪಾರ' ವಾಗ್ಯುದ್ಧ!
ವಿಧಾನಸಭೆಯಲ್ಲಿಂದು ವರ್ಗಾವಣೆ ವಿಚಾರ ಮತ್ತೆ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ವಾಗ್ವಾದವೇ ನಡೆದು ಕೆಲಕಾಲ ಸದನದಲ್ಲಿ ಕಾವೇರಿದ ವಾತಾವರಣ ಉಂಟಾಯಿತು.

ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಆರೋಪಕ್ಕೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ
ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಎಗ್ಗಿಲ್ಲದೆ ಉರುಳಾಡುತ್ತಿದೆ ಸರ್ಕಾರ; 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?
ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ .

ಮತ್ತೊಮ್ಮೆ ಆಡಳಿತಕ್ಕೆ ಮೇಜರ್ ಸರ್ಜರಿ: 34 ಡಿವೈಎಸ್ಪಿ, 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ
ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿ ಅಧಿಕಾರಿ ವರ್ಗಾವಣೆ ಮಾಡಿ ಸಿಎಂ ಆದೇಶ
ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿಯ ಮಳೆನೀರು ಚರಂಡಿ (ಎಸ್‌ಡಬ್ಲ್ಯುಡಿ) ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ್ ಆರ್ ಕಬಾಡೆ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಆಡಳಿತಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ.

ಯಾವುದೇ ಹುದ್ದೆ ತೋರಿಸದೆ ಎತ್ತಂಗಡಿ: ವರ್ಗಾವಣೆಗೆ ಸಿಎಟಿ ತಡೆ; ಸರ್ಕಾರಕ್ಕೆ ಮುಜುಗರ ತಂದಿಟ್ಟ ರವಿ ಚನ್ನಣ್ಣನವರ್
ಕಿಯೋನಿಕ್ಸ್ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರವಿಚನ್ನಣ್ಣನವರ್ ಅವರನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ವರ್ಗಾವಣೆ ಪ್ರಶ್ನಿಸಿ ರವಿ ಡಿ ಚೆನ್ನಣ್ಣನವರ್ ಸಿಐಟಿ ಮೊರೆ ಹೋಗಿ ತಡೆ ತಂದಿದ್ದರು. ಹೀಗಾಗಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು.

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

