transfer

ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರತಿಕ್ರಿಯೆ ಪ್ರಾರಂಭಿಸುವುದಾಗಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಮುಷ್ಕರ ಮುಂದುವರಿಕೆಗೆ ಪ್ರಚೋದನೆ: 88 ಸಿಬ್ಬಂದಿಗೆ ಕೆಎಸ್ ಆರ್ ಟಿಸಿಯಿಂದ ವರ್ಗಾವಣೆ ಆದೇಶ
ಇತರ ನೌಕರರನ್ನು ಮುಷ್ಕರ ಮುಂದುವರೆಸುವಂತೆ ಪ್ರಚೋದಿಸಿದ ಆರೋಪದ ಮೇರೆಗೆ 73 ಚಾಲಕರು ಮತ್ತು ನಿರ್ವಾಹಕರು, ನಾಲ್ವರು ಸಂಚಾರಿ ಮೇಲ್ವಿಚಾರಣಾ ಸಿಬ್ಬಂದಿ ಮತ್ತು 11 ಮೆಕ್ಯಾನಿಕಲ್ ಸಿಬ್ಬಂದಿಯನ್ನು ಕೆಎಸ್ ಆರ್ ಟಿಸಿ ಶನಿವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಮುಷ್ಕರ: ಹಲವು ನೌಕರರ ವರ್ಗಾವಣೆ, ಮುಂದುವರಿದ ಪ್ರಯಾಣಿಕರ ಪರದಾಟ
ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

'ಕೈ' ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ
ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ
ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆಗಸ್ಟ್ 15 ರೊಳಗೆ ಪ್ರಾರಂಭಿಸಿ: ಸುರೇಶ್ ಕುಮಾರ್
ಬಹು ನಿರೀಕ್ಷಿತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಆಗಸ್ಟ್ 15 ರೊಳಗೆ ಪ್ರಾರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜೀವ ಬೆದರಿಕೆ ಕರೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಹಠಾತ್ ವರ್ಗಾವಣೆ
ಕೊರೋನಾ ಸೋಂಕಿನ ಮಧ್ಯೆ ಹಠಾತ್ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಜೇಂದ್ರ ಕೆ ವಿ ಅವರನ್ನು ನೇಮಿಸಿದೆ.

ಕೋವಿಡ್ ನಿಯಂತ್ರಣ ಹಿನ್ನೆಲೆ; ಎಲ್ಲಾ ವಿಭಾಗದ ವರ್ಗಾವಣೆ ಸ್ಥಗಿತಗೊಳಿಸಿದ ಬಿಬಿಎಂಪಿ
ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿಯ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

