transfer

ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಿದ್ದರೂ ಸುಮ್ಮನಿರುವುದು ಏಕೆ? ಈಶ್ವರ್ ಖಂಡ್ರೆ ಪ್ರಶ್ನೆ
ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರನ್ನು ಸರ್ಕಾರ ಆರು ವಾರಗಳ ಕಾಲ ದಿಢೀರ್ ರಜೆ ಮೇಲೆ ಕಳುಹಿಸಿದ್ದಕ್ಕಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಡಿಎ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿಸಿ ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮತ್ತು ಭಾಸ್ಕರ್ ರಾವ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ನವದೆಹಲಿ: ವರ್ಗಾವಣೆ ಬಗ್ಗೆ ಫೆ. 17 ರಂದೇ ಮಾಹಿತಿ ನೀಡಲಾಗಿತ್ತು- ಜಸ್ಟೀಸ್ ಮುರಳೀಧರ್
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ದೆಹಲಿಯಿಂದ ವರ್ಗಾಯಿಸುವ ಮೊದಲು ತಮ್ಮಗೆ ಮಾಹಿತಿ ನೀಡಲಾಗಿತ್ತು ಎಂಬ ವಿಷಯವನ್ನು ನ್ಯಾಯಾಧೀಶ ಮುರಳೀಧರ್ ತಿಳಿಸಿದ್ದಾರೆ.

ದೆಹಲಿ ಹಿಂಸಾಚಾರ: ಪೊಲೀಸರ ತರಾಟೆಗೆ ತೆಗೆದುಕೊಂಡಿದ್ದ ಜಸ್ಟಿಸ್ ಎಸ್.ಮುರಳೀಧರ್ ವರ್ಗಾವಣೆ
ದೆಹಲಿ ಹಿಂಸಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಎಸ್.ಮುರಳೀಧರ್ ಅವರನ್ನು ಬುಧವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್'ಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ನ್ಯಾಯಾಧೀಶ ಮುರಳೀಧರ್ ವರ್ಗಾವಣೆ ನಾಚಿಕೆಗೇಡು, ಬೇಸರದ ಸಂಗತಿ: ಕಾಂಗ್ರೆಸ್
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮರುಳೀಧರ್ ವರ್ಗಾವಣೆ ನಾಚಿಕೆಗೇಡುತನ ಹಾಗೂ ಬೇಸರದ ಸಂಗತಿ ಎಂದು ಕಾಂಗ್ರೆಸ್ ಹೇಳಿದೆ.

ದೆಹಲಿ ಹಿಂಸಾಚಾರದ ಎಫೆಕ್ಟ್: ಐದು ಪೊಲೀಸ್ ಅಧಿಕಾರಿಗಳ ವರ್ಗಾವಣೆ
ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಐವರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕನಕಪುರ ಏಸು ಪ್ರತಿಮೆ ವಿವಾದ: ರಾತ್ರೋರಾತ್ರಿ ತಹಶೀಲ್ದಾರ್ ವರ್ಗಾವಣೆ
ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾನ್ ಆನಂದಯ್ಯ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

