Treatment

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್-19 ಸೋಂಕು ತಗುಲಿದರೆ ಏನು ಮಾಡಬೇಕು, ಹೋಂ ಐಸೊಲೇಷನ್ ನಲ್ಲಿ ಇರುವುದು ಹೇಗೆ?
ಕೋವಿಡ್ ಸೋಂಕು ತಗುಲಿ, ಹೋಂ ಐಸೊಲೇಷನ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದವರು ನಮ್ಮ ಸುತ್ತಮುತ್ತ ಹಲವರಿದ್ದಾರೆ, ಆದರೂ ನಮ್ಮಲ್ಲಿ ಸಾಕಷ್ಟು ಮಂದಿಗೆ ಕೊರೋನಾ ಸೋಂಕು ಬಂದರೆ ಏನು ಮಾಡಬೇಕು, ನಮ್ಮ ಕುಟುಂಬದವರಿಂದ ದೂರ ಇರುವುದು ಹೇಗೆ ಎಂಬೆಲ್ಲ ಗೊಂದಲಗಳು ಸಾಕಷ್ಟು ಕಾಡುತ್ತಿವೆ.

ಬ್ಲ್ಯಾಕ್ ಫಂಗಸ್ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್
ಬ್ಲ್ಯಾಕ್ ಫಂಗಸ್ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸಂದೇಶ ಕಳುಹಿಸುವ ಮುನ್ನ ಗಮನಿಸಿ: ವೈದ್ಯಕೀಯ ಸೌಲಭ್ಯ, ರೆಮೆಡಿಸಿವಿರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಸುಳ್ಳು ಮಾಹಿತಿ!
ಕೊರೋನಾ ಸೋಂಕಿತ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಮತ್ತು ರೆಮೆಡಿಸಿವಿರ್ ಔಷಧಿಗೆ ಕೊರತೆ ಉಂಟಾಗಿದೆ. ಈ ಮಧ್ಯೆ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಗೊಂದಲದ, ಆತಂಕ ಹುಟ್ಟಿಸುವ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ನಾಗರಿಕರ ಭಯ, ಆತಂಕಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ನರೇಂದ್ರ ಮೋದಿ ಮತ್ತು ಬಿ ಎಸ್ ಯಡಿಯೂರಪ್ಪನವರು ಕೊರೋನಾಕ್ಕಿಂತಲೂ ಅಪಾಯಕಾರಿ: ಸಿದ್ದರಾಮಯ್ಯ ಆರೋಪ
ಕೊರೋನಾ ಸೋಂಕಿನಲ್ಲಿ ಭಾರತವನ್ನು ವಿಶ್ವದಲ್ಲಿಯೇ ನಂಬರ್ 1 ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ಸುಕವಾಗಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕರ್ನಾಟಕವನ್ನು ಕೊರೋನಾ ಸೋಂಕಿನಲ್ಲಿ ದೇಶದಲ್ಲಿ ನಂಬರ್ 1 ಮಾಡಲು ಹೊರಟಿದ್ದಾರೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಂಜಯ್ ದತ್ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗಾಗಿ ಪ್ರಾರ್ಥಿಸಿ; ಮಾನ್ಯತಾ
ಬಾಲಿವುಡ್ ನಟ ಸಂಜಯ್ ದತ್‌ಗೆ (61 ವರ್ಷ) ಶ್ವಾಸಕೋಶ ಕ್ಯಾನ್ಸರ್ ಪತ್ತೆಯಾಗಿದ್ದು, ಮುಂಬೈನಲ್ಲೇ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತ್ನಿ ಮಾನ್ಯತಾ ಸ್ಪಷ್ಟ ಪಡಿಸಿದ್ದಾರೆ.

ಪ್ರತಿಯೊಬ್ಬ ಕೊರೋನಾ ರೋಗಿಗೂ ಸೂಕ್ತ ಚಿಕಿತ್ಸೆ ಸರ್ಕಾರದ ಪ್ರಥಮ ಆದ್ಯತೆ-ಡಾ.ಕೆ.ಸುಧಾಕರ್
ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ.ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಆಸ್ಪತ್ರೆಗಳ ಅಮಾನವೀಯ ವರ್ತನೆ: ಹೊರ ಪ್ರಪಂಚ ನೋಡುವುದಕ್ಕೂ ಮುನ್ನವೇ ಅಸುನೀಗಿದ ಮಗು!
ಸತತ 8 ಗಂಟೆಗಳ ಕಾಲ ಹೆರಿಗೆ ನೋವಿನಿಂದ ಬಳಲುತ್ತಾ ಆಸ್ಪತ್ರೆಗಳಿಗೆ ಸುತ್ತಾಡಿದರೂ ದಾಖಲು ಎಲ್ಲಿಯೂ ದಾಖಲು ಮಾಡಿಕೊಳ್ಳದ ಪರಿಣಾಮ ಪ್ರಪಂಚವನ್ನು ನೋಡಬೇಕಾಗಿದ್ದ ಕಂದಮ್ಮ ಜೀವ ಬಿಟ್ಟಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ಸೋಮವಾರ ನಡೆದಿದೆ.

ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಡಾ. ಕೆ.ಸುಧಾಕರ್
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

