ರಾಜಕೀಯಕರ್ನಾಟಕದ ಉಪಚುನಾವಣೆಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸದ ಬಿಜೆಪಿ: ಜೆಡಿಎಸ್ ಗೆ ಜಿಗಿಯಲಿದ್ದಾರಾ 'ತುಳಸಿ'?
ಭಾರತೀಯ ಜನತಾ ಪಕ್ಷ ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತ್ತು ಐದು ರಾಜ್ಯಗಳಲ್ಲಿ ಉಪಚುನಾವಣೆಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ. ಆದರೆ ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರಗಳ ಉಪಚುನಾವಣೆ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.