ರಾಜ್ಯಟರ್ಕಿ, ಸಿರಿಯಾದಲ್ಲಿ ಭೂಕಂಪ: ಕನ್ನಡಿಗರ ಮಾಹಿತಿಗಾಗಿ ಶೀಘ್ರದಲ್ಲೇ ಸಹಾಯವಾಣಿ ಸ್ಥಾಪನೆ- ಸಿಎಂ ಬೊಮ್ಮಾಯಿ
ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.