Tushar Girinath

ಕಳ್ಳಾಟಕ್ಕೆ ಬ್ರೇಕ್: ಮೊಬೈಲ್ ಆ್ಯಪ್ ಆಧಾರಿತ ಕಚೇರಿ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿದ ಬಿಬಿಎಂಪಿ!
ಸಮಯಕ್ಕೆ ಸರಿಯಾಗಿ ಬಿಬಿಎಂಪಿ ಕಚೇರಿಗಳಿಗೆ ಅಧಿಕಾರಿ ಸಿಬ್ಬಂದಿ ಬರಲ್ಲ. ಇದರ ಒಟ್ಟಾರೆ ಪರಿಣಾಮ ಪಾಲಿಕೆ ಆಡಳಿತದ ಮೇಲಾಗುತ್ತಿದೆ, ನಾಗರೀಕರಿಗೂ ಅಗತ್ಯ ಸೌಕರ್ಯ ಕಲ್ಪಿಸಲು ತೊಂದರೆಯಾಗುತ್ತಿದೆ. ಈ ಸಮಸ್ಯೆಗಳ ದೂರಾಗಿಸಲು ಪಾಲಿಕೆಯು ಮೊಬೈಲ್ ಆ್ಯಪ್ ಆಧಾರಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.

ಜಯನಗರ ವಾಣಿಜ್ಯ ಸಂಕೀರ್ಣ: ಪಾದಚಾರಿ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ
ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಬುಧವಾರ ಪರಿಶೀಲಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ರಮ ಮಳಿಗೆ ತೆರವು ಮಾಡಿಸುವಲ್ಲಿ ವಿಫಲ: ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ
ಜಯನಗರ ಶಾಪಿಂಗ್ ಸಮುಚ್ಚಯದ ನೆಲಮಾಳಿಗೆಯ ಪಾರ್ಕಿಂಗ್ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಳಿಗೆಗಳನ್ನು ತೆರವುಗೊಳಿಸುವಂತೆ ಸೂಚಿಸಿ ಮೂರು ವರ್ಷಗಳ ಹಿಂದೆ ನ್ಯಾಯಾಲಯ ಹೊರಡಿಸಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ಗುರುವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಚಿಲುಮೆ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಿಲುಮೆ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆಗೆ ಆದೇಶ ನೀಡಿದೆ.

ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು
ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.

ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುಪುವಂತೆ ಮಾಡಲು ವಿಶೇಷ ಗಮನ ನೀಡಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುವಂತೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಶೇಷ ಗಮನ ನೀಡಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದರು.

ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ: ಬಿಬಿಎಂಪಿ
ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒತ್ತುವರಿ ಮಾಡಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಬಿಬಿಎಂಪಿ ಅಗ್ನಿ ದುರಂತ: ಇಬ್ಬರಿಗೆ ಉಸಿರಾಟದ ತೊಂದರೆ; ತನಿಖೆಗೆ ಕಾಲಾವಕಾಶ ನೀಡಬೇಕು ಎಂದ ತುಷಾರ್ ಗಿರಿನಾಥ್
ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರು ರೋಗಿಗಳಿಗೆ ಉಸಿರಾಡಲು ಕಷ್ಟವಾದ ಕಾರಣ ನಸಲ್ ಕ್ಯಾತೆಟರ್‌ಗಳನ್ನು (nasal catheter) ಹಾಕಲಾಗಿದೆ.

ಗೃಹಲಕ್ಷ್ಮೀ ಯೋಜನೆ: ನೋಡಲ್ ಅಧಿಕಾರಿಯಾಗಿ ಕಂದಾಯ ಇಲಾಖೆ ಉಪ ಆಯುಕ್ತೆ ಲಕ್ಷ್ಮೀದೇವಿ ನೇಮಕ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ಆಗಸ್ಟ್ 16 ರಂದು ಜಾರಿಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ಜಾರಿಗೊಳಿಸಲು ಎಲ್ಲಾ ವಾರ್ಡ್ ಕಚೇರಿಗಳಲ್ಲಿ ನೋಂದಣಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

