Tweet

ಸೋಲುಗಳು ಜೀವನದ ಒಂದು ಭಾಗ, ಇಂತಹ ಸೋಲುಗಳನ್ನು ಜೀವನದಲ್ಲಿ ಬಹಳ ನೋಡಿದ್ದೇನೆ: ಕೆ.ಅಣ್ಣಾಮಲೈ
ಸೋಲುಗಳು ಜೀವನದ ಒಂದು ಭಾಗ. ಇಂತಹ ಸೋಲುಗಳನ್ನ ಜೀವನದಲ್ಲಿ ನಾನು ಬಹಳ ನೋಡಿದ್ದೇನೆಂದು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಅಣ್ಣಾಮಲೈ ಅವರು ಹೇಳಿದ್ದಾರೆ.

ಯುಪಿ: ಆಕ್ಸಿಜನ್ ಸಿಲಿಂಡರ್‌ಗಾಗಿ ನಟ ಸೋನು ಸೂದ್‌ಗೆ ಟ್ಯಾಗ್ ಮಾಡಿ ಟ್ವೀಟ್, ವ್ಯಕ್ತಿಯನ್ನು ಜೈಲಿಗಟ್ಟಿದ ಪೊಲೀಸರು
ಆಕ್ಸಿಜನ್ ಸಿಲಿಂಡರ್ ಬೇಕೆಂದು ಟ್ವೀಟ್ ಮಾಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾನೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದವನ ವಿರುದ್ಧ ಸಾಂಕ್ರಾಮಿಕ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

'ಯಡಿಯೂರಪ್ಪ ಅವರೇ, ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’
ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಚರ್ಚೆ ನಡೆಸಿದ್ದು ಸಾಕು, ಲಸಿಕೆ ಉಚಿತವಾಗಿ ನೀಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ
ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಭಾರತವನ್ನು ಬಲಿಪಶು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ'
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಂದ ಆಸ್ಪತ್ರೆಯಲ್ಲಿ, ಆಂಬುಲೆನ್ಸ್, ಚಿತಾಗಾರದವರು ಹಣ ವಸೂಲಿ ಮಾಡುತ್ತಿರುವ ಹಲವು ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಈ ಕುರಿತು ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.

ಸುಮಿತ್ರಾ ಮಹಾಜನ್ ಸಾವಿನ ಸುಳ್ಳು ಸುದ್ದಿ ಟ್ವೀಟ್ ಮಾಡಿ ನಂತರ ಡಿಲೀಟ್ ಮಾಡಿದ ಶಶಿ ತರೂರ್!
ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ.

ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯ ಇದೇ ಮೊದಲ ಬಾರಿ ನೋಡುತ್ತಿದ್ದೇನೆ: ರಾಹುಲ್ ಗಾಂಧಿ
ಇಷ್ಟು ದೊಡ್ಡ ಪ್ರಮಾಣದ ಜನರ ಸಾವು, ಅನಾರೋಗ್ಯವನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

ಉಪಚುನಾವಣೆ ಸಮರ: ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಸಿಎಂ ಯಡಿಯೂರಪ್ಪ ಮನವಿ
ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ.

'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'
ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

