Two killed

ರಾಮನಗರ: ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ; ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಗುದ್ದಿದ ಓಮಿನಿ ಕಾರು- ಇಬ್ಬರ ದುರ್ಮರಣ
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಇಟಲಿ: ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ, ಅಪಾಯದಿಂದ ಪಾರು; ವೃದ್ಧ ದಂಪತಿ ಸಾವು
ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು
ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವೇರಿ: ಊರಿಗೆ ತೆರಳಲು ನಿಂತಿದ್ದವರ ಮೇಲೆ ಹರಿದ ಕಾರು; ಇಬ್ಬರ ಭೀಕರ ಸಾವು
ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳ ದುರ್ಮರಣ
ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣ
ಲಾರಿಯೊಂದು ಬೈಕ್ ಡಿಕ್ಕಿ ಹೊಡೆದು ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.

ರಾಯಚೂರು: ಕೆರೆಯಲ್ಲಿ ಮುಳುಗಿ ಇಬ್ಬರ ಸಾವು
ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ ಸಹೋದರನ ಮಗ ಮೃತ ಪಟ್ಟಿದ್ದಾರೆ.

ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ
ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೋಲಾರ-ಆಂಧ್ರ ಪ್ರದೇಶ ಗಡಿಯಲ್ಲಿಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ನಡೆದಿದೆ.

ಹೊಸಕೋಟೆ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ!
ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

