ರಾಜ್ಯದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವನೆ, ಇಬ್ಬರು ಕಾರ್ಮಿಕರು ಸಾವು
ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೌರ ಕಾರ್ಮಿಕರಾದ 45 ವರ್ಷದ ದುಂಡಪ್ಪ ಮತ್ತು 42 ವರ್ಷದ ನಾಗಪ್ಪ ಎಂದು ಗುರುತಿಸಲಾಗಿದೆ.