U T Khader

ಫೆ.9ರಂದು ಶಾಸಕರಿಗೆ ರಾಜ್ಯ ಬಜೆಟ್ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ: ಯುಟಿ ಖಾದರ್
ಫೆಬ್ರವರಿ 9ರಂದು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ರಾಜ್ಯ ಬಜೆಟ್ ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಸುವರ್ಣಸೌಧದಲ್ಲಿ ತಮ್ಮ ನೆನಪಿಗಾಗಿ ಗಿಡ ನೆಡಲಿದ್ದಾರೆ 300 ಶಾಸಕರು!
ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಜಂಟಿ ವಿಧಾನಮಂಡಲದ ಅಧಿವೇಶನದಲ್ಲಿ 300 ಶಾಸಕರು ತಲಾ ಒಂದೊಂದು ಗಿಡ ನೆಡಲಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

10 ಮಂದಿ ಬಿಜೆಪಿ ಶಾಸಕರ ಅಮಾನತು: ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ, ರಾಜ್ಯಪಾಲರಿಗೆ ದೂರು
ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

ನಾಯಕರ ಎದೆಯಲ್ಲಿ ಅಂತಸ್ಥವಾದ ಹಿಟ್ಲರ್‌ನನ್ನು ಪ್ರದರ್ಶನಕ್ಕೆ ಇಟ್ಟಿರಿ; ಸ್ಪೀಕರ್ ಸ್ಥಾನ ಆಳುವವರ ಆಸೆಗೆ ಗೋಣು ಆಡಿಸುವ ಅಡ್ಡೆಯಲ್ಲ!
ರಾಜ್ಯದ ಶ್ರೇಷ್ಠ ಸ್ಪೀಕರ್ ಎಂದು ಮಾದರಿ ಹೆಜ್ಜೆ ಬಿಟ್ಟು ಹೋದ ದಿವಂಗತ ವೈಕುಂಠ ಬಾಳಿಗರ ಜಿಲ್ಲೆಯಿಂದ ಬಂದ ನೀವು ಅವರದೇ ಮಾರ್ಗದಲ್ಲಿ ನಡೆಯಬಹುದೆಂದು ವೈಯಕ್ತಿಕವಾಗಿ ನಾನು ಭಾವಿಸಿದ್ದೆ. ಆದರೆ, ನೀವು ನಮ್ಮೆಲ್ಲರ ನಂಬಿಕೆಯನ್ನು ಹುಸಿಗೊಳಿಸಿ ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದಿರಿ.

ನಾನು ಮನಷ್ಯನಲ್ವ ಮಾರಾಯ್ರೆ, ಊಟಕ್ಕೆ ಕರೆದಿದ್ರೂ ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ!
ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಇದರ ಭಾಗವಾಗಿ ಸೋನಿಯಾ ಗಾಂಧಿ ಡಿನ್ನರ್ ಪಾರ್ಟಿಗೆ ಸ್ಪೀಕರ್ ಯು.ಟಿ ಖಾದರ್ ಹೋಗಿದ್ದರು.

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್
ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬುಧವಾರ ಹೇಳಿದರು.

ಸ್ಪೀಕರ್ ಹುದ್ದೆ ನನ್ನ ಜನಪರ ಕೆಲಸಗಳಿಗೆ ಅಡ್ಡಿಯಾಗುವುದಿಲ್ಲ: ಯು ಟಿ ಖಾದರ್
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ಬಳಿಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಿನ್ನೆ ಗುರುವಾರ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು. ಸಭಾಪತಿ ಸ್ಥಾನಕ್ಕೆ ಅಡ್ಡಿಯಾಗದಂತೆ ಶಾಸಕನಾಗಿ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ, ಕಟ್ಟು ನಿಟ್ಟಾಗಿ ತಟಸ್ಥನಾಗಿರುವೆ: ಯು.ಟಿ ಖಾದರ್ (ಸಂದರ್ಶನ)
ಐದು ಬಾರಿ ಶಾಸಕರಾಗಿರುವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮುಸ್ಲಿಂ ಸಮುದಾಯದ ಸದಸ್ಯರಾಗಿದ್ದಾರೆ.

ಯಾರ ಬಣದಲ್ಲೂ ಗುರುತಿಸಿಕೊಳ್ಳದ ಖಾದರ್ ಸ್ಪೀಕರ್ ಸ್ಥಾನ ಒಪ್ಪಿದ್ದೇಕೆ? ತಮ್ಮ ಪರ ಲಾಬಿ ಮಾಡಲು ಯಾರೂ ಇಲ್ಲ ಎಂಬ ಕಾರಣಕ್ಕೆ?
ಮಾಜಿ ಸಚಿವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಯು.ಟಿ ಖಾದರ್ ಸಿದ್ದರಾಮಯ್ಯ ಸರ್ಕಾರದಲ್ಲಿ ಸತಚಿವರಾಗಿ ಕೆಲಸ ಮಾಡಿದ್ದರು.

