UAPA

ಚೀನಾದಿಂದ ಕಾನೂನುಬಾಹಿರ ದೇಣಿಗೆ ಸಂಗ್ರಹ ಆರೋಪ: ನ್ಯೂಸ್‌ಕ್ಲಿಕ್‌ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ
ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ .

ಬೆಂಗಳೂರು ಗಲಭೆ ಪ್ರಕರಣ: ಐಪಿಸಿ, ಯುಎಪಿಎ ಅಡಿಯಲ್ಲಿ ಎನ್ಐಎ ವಿಚಾರಣೆ ನಡೆಸಬಹುದು- ಹೈಕೋರ್ಟ್
ನಗರದ ಡಿಜೆಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣ ಸಂಬಂಧ ಆರೋಪಿಯೊಬ್ಬನ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಸಾರ್ವಜನಿಕ ಆಸ್ತಿ ತಡೆ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಎನ್ಐಎ ವಿಶೇಷ ಕೋರ್ಟ್ ಕ್ರಮ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದೇಕೆ?: ಗೃಹ ಸಚಿವಾಲಯ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಏನಿದೆ?
ಭಯೋತ್ಪಾದಕ ಚಟುವಟಿಕೆಗಳು ಮತ್ತು ಇತರ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ), ಜಮಾತ್-ಉಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA act), 1967 ರ ಅಡಿಯಲ್ಲಿ ಐದು ವರ್ಷಗಳ ಕಾಲ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದೆ.

PFI ಅನ್ನು 5 ವರ್ಷಗಳ ಕಾಲ ನಿಷೇಧಿಸಿದ್ದೇಕೆ? ಇಲ್ಲಿವೆ 10 ಕಾರಣಗಳು
ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆ ಗೃಹ ವ್ಯವಹಾರಗಳ ಸಚಿವಾಲಯ (MHA) ಬುಧವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಸಂಬಂಧಿತ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದೆ.

102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲು
ತ್ರಿಪುರಾ ಪೊಲೀಸರು 102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದಾರೆ.

ಭಾರತದ ವಿರುದ್ಧ ಪಾಕ್ ಜಯ; ಸಂಭ್ರಮಾಚರಣೆ ಮಾಡಿದ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ
ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಯನ್ನು ಜಾರಿಗೊಳಿಸಲಾಗಿದೆ.

ಎಲ್ಗರ್ ಪರಿಷದ್ ಪ್ರಕರಣ ಆರೋಪಿಗಳು ದೇಶದ ವಿರುದ್ಧ ಯುದ್ಧ ಸಾರಲು ಬಯಸಿದ್ದರು: ಎನ್ ಐಎಯಿಂದ ಕರಡು ಆರೋಪ ಸಲ್ಲಿಕೆ
ಎಲ್ಗರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮುಂದೆ ಕರಡು ಆರೋಪಪಟ್ಟಿ ಸಲ್ಲಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ), ಆರೋಪಿಗಳು ತಮ್ಮದೇ ಸ್ವಂತ ಸರ್ಕಾರ ರಚಿಸಿ ದೇಶದ ವಿರುದ್ಧ ಯುದ್ಧ ಸಾರಲು ನೋಡಿದ್ದರು ಎಂದು ಪ್ರತಿಪಾದಿಸಿದೆ.

ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಲ್ಲದು: ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವ ಹಾಗೂ ಪ್ರಜೆಗಳ ಸ್ವಾತಂತ್ರ್ಯಕ್ಕೆ ಮಾರಕವಾಗಬಲ್ಲದು ಎಂದು ಮಾಜಿ ಅಧಿಕಾರಿಗಳ ಗುಂಪೊಂದು ಬಹಿರಂಗ ಪತ್ರ ಬರೆದಿದ್ದಾರೆ.

ದೆಹಲಿ ಗಲಭೆ: ಆರೋಪಿ ತಸ್ಲೀಮ್ ಅಹ್ಮದ್'ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸಮ್ಮತಿ
ದೆಹಲಿ ಗಲಭೆ ಪಿತೂರಿ ನೀಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆ(ತಡೆ) ಕಾಯ್ದೆಯಡಿ ಬಂಧಿಸಲ್ಪಟ್ಟ ತಸ್ಲೀಮ್ ಅಹ್ಮದ್‌ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ.

