ರಾಜ್ಯಸರ್ಕಾರಕ್ಕೆ ಜವಾಬ್ದಾರಿ ಇದೆ, ಉಡುಪಿ ವಿದ್ಯಾರ್ಥಿನಿ ಪ್ರಕರಣವನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ: ಡಾ. ಜಿ ಪರಮೇಶ್ವರ್
ಉಡುಪಿ ಕಾಲೇಜಿನ ವಿದ್ಯಾರ್ಥಿನಿ ಶೌಚೌಲಯಕ್ಕೆ ತೆರಳಿದ್ದಾಗ ವಿಡಿಯೊ ಚಿತ್ರೀಕರಣ ಮಾಡಿದ್ದ ಘಟನೆ ಬಗ್ಗೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಘಟನೆ ಬಹಳ ಸಣ್ಣದು. ಅದಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.