ದೇಶಜೈಲಿನಲ್ಲಿ ಸ್ಲೋ ಪಾಯ್ಸನ್ ನೀಡಿ ಹತ್ಯೆ: ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಹೇಳಿಕೆ
ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದ್ದಾರೆ.