ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ-2020: ಪದವಿ ಕೋರ್ಸ್ ನ ಮೊದಲ ಎರಡು ವರ್ಷ ಕನ್ನಡ ಭಾಷೆ ಕಡ್ಡಾಯ
ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ.