ದೇಶಭಯ, ದ್ವೇಷ - ನಿರುದ್ಯೋಗ, ಹಣದುಬ್ಬರದ ವಿರುದ್ಧ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ತಮ್ಮ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ದೇಶದ ಎಲ್ಲೆಡೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಪಾದಯಾತ್ರೆಯು ಸಮಾಜದಲ್ಲಿ ಹರಡುತ್ತಿರುವ ದ್ವೇಷ ಮತ್ತು ಭಯದ ವಿರುದ್ಧ ಹಾಗೂ ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದರು.