Unemployment

ನಿರುದ್ಯೋಗ ಕುರಿತ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ ಮರೆಮಾಚುತ್ತಿದೆ: ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್
ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಅಂಕಿಅಂಶಗಳನ್ನು ಮರೆಮಾಚುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಡಾ.ಪರಕಾಲ ಪ್ರಭಾಕರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಸಂಸತ್ ಭದ್ರತೆ ಉಲ್ಲಂಘನೆ ಹಿಂದೆ ನಿರುದ್ಯೋಗ, ಬೆಲೆ ಏರಿಕೆ ಕಾರಣ: ರಾಹುಲ್ ಗಾಂಧಿ
ಸಂಸತ್ ಭವನದ ಭದ್ರತೆ ಉಲ್ಲಂಘನೆ ಘಟನೆಗೆ ನಿರುದ್ಯೋಗ, ಬೆಲೆ ಏರಿಕೆ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಭಾರತದ ನಿರುದ್ಯೋಗ ದರ ಅತ್ಯಂತ ಕಡಿಮೆ: ಪ್ರಧಾನಿ ಮೋದಿ
ಭಾರತದ ವಿಸ್ತಾರಗೊಳ್ಳುತ್ತಿರುವ ಆರ್ಥಿಕತೆಯು ಯುವಜನರಿಗೆ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ನಿರುದ್ಯೋಗ ದರ ಕಳೆದ ಆರು ವರ್ಷಗಳಲ್ಲಿ ಅತ್ಯಂತ ಕಡಿಮೆ ಇದೆ...

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ: ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತರಾಟೆ
ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ವಾಗ್ದಾಳಿ ನಡೆಸಿದ್ದು, ಜನರು ಬಿಜೆಪಿಯ 'ಪೊಳ್ಳು ಘೋಷಣೆಗಳಿಗೆ' ಬೆಲೆ ಕೊಡುವುದಿಲ್ಲ ಮತ್ತು ಈ ಬಾರಿ ಅದನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಹೇಳಿದ್ದಾರೆ.

'ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು' ಎಂಬ ನೀತಿ ಪಾಲಿಸುತ್ತಿರುವ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ
ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು ಎಂಬ ನೀತಿ ಪಾಲಿಸುತ್ತಿರುವ ಪ್ರಧಾನಿ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಹಬ್ಬ-ಹರಿದಿನಗಳ ಸಂದರ್ಭ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಉತ್ತುಂಗಕ್ಕೆ: ವರದಿ
ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಹಬ್ಬದ ಮಾರಾಟ ಮತ್ತು ಹೆಚ್ಚುತ್ತಿರುವ ದೇಶೀಯ ಬೇಡಿಕೆಯು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ.. ಬದಲಿಗೆ ಈ ಸಮಯದಲ್ಲಿ ನಿರುದ್ಯೋಗ ಪ್ರಮಾಣ ಉತ್ತುಂಗಗದಲ್ಲಿದೆ ಎಂದು ವರದಿಯೊಂದು ತಿಳಿಸಿದೆ.

ನಾಲ್ಕು ರಾಜ್ಯಗಳ ಶೇ.39 ಮಂದಿಗೆ ಕೋವಿಡ್ ಸಮಯದಲ್ಲಿ ನರೇಗಾ ಯೋಜನೆಯಡಿ ಒಂದು ದಿನವೂ ಕೆಲಸ ಸಿಕ್ಕಿಲ್ಲ!
ಭಾರತದ ನಾಲ್ಕು ರಾಜ್ಯಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 2020-21 ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ 2005ರ ಅಡಿಯಲ್ಲಿ ನೋಂದಾಯಿಸಲಾದ ಎಲ್ಲಾ ಉದ್ಯೋಗ ಕಾರ್ಡು ಹೊಂದಿರುವ ಸುಮಾರು ಶೇಕಡಾ 39ರಷ್ಟು ಕುಟುಂಬಗಳಿಗೆ ಒಂದು ದಿನವೂ ಕೆಲಸ ನೀಡಲಾಗಿಲ್ಲ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐದಾರು ಶ್ರೀಮಂತ ಭಾರತೀಯರಿಗಾಗಿ ಇದೆ: ರಾಹುಲ್ ಗಾಂಧಿ
ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಸರ್ಕಾರ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಅಲ್ಲ. ಬದಲಿಗೆ ಐದಾರು ಶ್ರೀಮಂತ ಭಾರತೀಯರಿಗಾಗಿ ಎಂದು ಆರೋಪಿಸಿದ್ದಾರೆ.

45 ವರ್ಷಗಳಲ್ಲಿಯೇ ನಿರುದ್ಯೋಗ ಪ್ರಮಾಣ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆ: ರಾಹುಲ್ ಗಾಂಧಿ
ದೇಶದಲ್ಲಿ 45 ವರ್ಷಗಳಲ್ಲಿಯೇ ನಿರುದ್ಯೋಗ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆಯಾಗಿದ್ದು,ಯುವಜನರ ಭವಿಷ್ಯವನ್ನು ಬಲಪಡಿಸುವುದು ಮತ್ತು ದೇಶದ ಯುವಕರ ಮನಸ್ಸಿನಲ್ಲಿ ಸಕಾರಾತ್ಮಕತೆಯನ್ನು ತರುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ .

