ರಾಜ್ಯಕಾಲುವೆ ದುರಸ್ತಿ ಕಾಮಗಾರಿ ನಿಧಾನ: ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಮೊಕ್ಕಾಂ ಹೂಡಿ ಪ್ರತಿಭಟನೆ
ಬಳ್ಳಾರಿ ಬಳಿ ರಾಜಕಾಲುವೆ ದುರಸ್ತಿ ಕಾಮಗಾರಿಗೆ ವೇಗ ನೀಡಲು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ದುರಸ್ತಿ ಕಾಮಗಾರಿ ಮುಗಿಯುವವರೆಗೂ ತಾವು ಇಲ್ಲಿಂದ ತೆರಳುವುದಿಲ್ಲ ಎಂದು ಹಠ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.