ರಾಜ್ಯ74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ
74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.