ರಾಜ್ಯಕೇಂದ್ರ ಸಚಿವ ಭೂಪೀಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿ
ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.