Union Health Ministry

ದೇಶದಲ್ಲಿ 4 ಕೋಟಿ ಗಡಿಯತ್ತ ಕೋವಿಡ್-19 ಪರೀಕ್ಷೆಗಳು
ದೇಶದಲ್ಲಿ ಕಳೆದ ಎರಡು ವಾರಗಳಲ್ಲಿ 1 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೇ, 3 ಕೋಟಿ 94 ಲಕ್ಷದ 77 ಸಾವಿರದ 848 ಕೋವಿಡ್- 19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ನಿನ್ನೆ ಒಂದೇ ದಿನ ಅತ್ಯಂತ ಹೆಚ್ಚಿನ 62,282 ಸೋಂಕಿತರು ಗುಣಮುಖ, 29 ಲಕ್ಷ ಗಡಿ ದಾಟಿದ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68 ಸಾವಿರದ 898 ಹೊಸ ಪ್ರಕರಣಗಳೊಂದಿಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ 29 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೋವಿಡ್-19: ರಾಜ್ಯದ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಶ್ಲಾಘಿಸಿದ ಕೇಂದ್ರ ಆರೋಗ್ಯ ಸಚಿವಾಲಯ!
ಕೋವಿಡ್-19 ಎದುರಿಸುವಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರು ಪ್ರಮುಖ ಆಧಾರ ಸ್ತಂಭವಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮುಕ್ತ ಕಂಠದಿಂದ ಶ್ಲಾಘಿಸಿದೆ.

ದೇಶದಲ್ಲಿ ಕೋವಿಡ್-19ನಿಂದ ಗುಣಮುಖರಾದವರ ಪ್ರಮಾಣ ಶೇ.59.52ಕ್ಕೆ ಏರಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ 11 ಸಾವಿರದ 881 ಕೋವಿಡ್-19 ರೋಗಿಗಳು ಗುಣಮುಖರಾಗಿದ್ದು, ಒಟ್ಟು 3 ಲಕ್ಷದ 59 ಸಾವಿರದ 859 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ ವೈರಸ್: ಕರ್ನಾಟಕದ 8 ಜಿಲ್ಲೆ ಸೇರಿ ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ
ಕರ್ನಾಟಕ ರಾಜಧಾನಿ ಬೆಂಗಳೂರು, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲ್ಬುರ್ಗಿ ಸೇರಿದಂತೆ ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗಿರುವ 170 ಜಿಲ್ಲೆಗಳನ್ನು ಕೇಂದ್ರ ಸರ್ಕಾರ ರೆಡ್ ಜೋನ್ ಎಂದು ಘೋಷಣೆ ಮಾಡಿದೆ.

70 ಲಕ್ಷ ಕೋವಿಡ್-19 ಟೆಸ್ಟಿಂಗ್ ಕಿಟ್ ಗಳಿಗೆ ಆರ್ಡರ್ ಮಾಡಿದ ಭಾರತ!
ಕೊರೋನಾವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವು ರೀತಿಯ ಕ್ರಮ ಕೈಗೊಂಡಿದ್ದು, ಹೆಚ್ಚುವರಿಯಾಗಿ 70 ಲಕ್ಷ ಟೆಸ್ಟಿಂಗ್ ಕಿಟ್ ಗಳಿಗೆ ಆರ್ಡರ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೋನಾ ವೈರಸ್: ಕೇವಲ 24 ಗಂಟೆಗಳಲ್ಲಿ ಹೊಸ 478 ಕೋವಿಡ್ 19 ಪ್ರಕರಣ ದಾಖಲು, 2,547ಕ್ಕೇರಿದ ಸೋಂಕಿತರ ಸಂಖ್ಯೆ, 63 ಸಾವು
ದೇಶದಲ್ಲಿ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 478 ಪ್ರಕರಣಗಳು ದಾಖಲಾಗಿದ್ದು. ಆ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,547ಕ್ಕೆ ಏರಿಕೆಯಾಗಿದೆ. ಅಂತೆಯೇ ಸಾವಿನ ಸಂಖ್ಯೆ ಕೂಡ 63ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್: ದೆಹಲಿಯಲ್ಲಿ 293, ತೆಲಂಗಾಣದಲ್ಲಿ 154, ಭಾರತದಲ್ಲಿ 2069ಕ್ಕೇರಿದ ವೈರಸ್ ಸೋಂಕಿತರ ಸಂಖ್ಯೆ
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಧಾರ್ಮಿಕ ಸಭೆ ಬಳಿಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದ್ದು, ದೇಶದಲ್ಲಿ ಒಟ್ಟಾರೆ ವೈರಸ್ ಸೋಂಕಿತರ ಸಂಖ್ಯೆ ಇದೀಗ 2 ಸಾವಿರದ ಗಡಿ ದಾಟಿ, 2069ಕ್ಕೆ ಏರಿಕೆಯಾಗಿದೆ.

ನಿಜಾಮುದ್ದೀನ್ ಮರ್ಕಜ್: ಕನಿಷ್ಠ 400 ಮಂದಿಗೆ ಕೊರೋನಾ ವೈರಸ್ ಸೋಂಕು, ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳು ಕ್ವಾರಂಟೈನ್ ಗೆ- ಕೇಂದ್ರ ಸರ್ಕಾರ
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಕನಿಷ್ಠ 400 ಮಂದಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಕಂಡು ಬಂದಿದ್ದು, ಇವರ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

