ರಾಜ್ಯರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನ: ರೈಲ್ವೆ- ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ರಚನೆಗೆ ತೀರ್ಮಾನ
ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ರೈಲ್ವೆ ಇಲಾಖೆ ಹಾಗೂ ಕರ್ನಾಟಕ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತೀರ್ಮಾನಿಸಿದ್ದಾರೆ.