ರಾಜ್ಯಕಾವೇರಿ ವಿವಾದ: ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ- ಸುಮಲತಾ ಅಂಬರೀಶ್
ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.