ದೇಶಜೂನ್ 24 ರಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ: ಖರ್ಗೆ ಭೇಟಿಯಾದ ಸಚಿವ ಕಿರಣ್ ರಿಜಿಜು
18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಒಂದು ವಾರ ಮುಂಚಿತವಾಗಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. 10, ರಾಜಾಜಿ ಮಾರ್ಗ್ ನಿವಾಸದಲ್ಲಿ ಖರ್ಗೆ ಅವರನ್ನು ರಿಜಿಜು ಭೇಟಿಯಾಗಿದ್ದು, ಇದು ಒಂದು ಸೌಜನ್ಯಯುತ ಭೇಟಿ ಎಂದು ಹೇಳಲಾಗಿದೆ.