United Nations

'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರ
ಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತದಲ್ಲಿ 15 ವರ್ಷಗಳಲ್ಲಿ 415 ಮಿಲಿಯನ್ ಜನರು ಬಡತನದಿಂದ ಮುಕ್ತ: ವಿಶ್ವಸಂಸ್ಥೆ
2005-2006 ರಿಂದ 2019-2021 ರವರೆಗೆ ಕೇವಲ 15 ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 415 ಮಿಲಿಯನ್ ಜನರು ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. ಇದು ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರದ ಗಮನಾರ್ಹ ಸಾಧನೆಯನ್ನು ಎತ್ತಿ ತೋರಿಸುತ್ತದೆ.

ಮಕ್ಕಳು ಮತ್ತು ಸಂಘರ್ಷ: 12 ವರ್ಷಗಳ ಬಳಿಕ, ಭಾರತವನ್ನು ಶ್ಲಾಘಿಸಿ ವಾರ್ಷಿಕ ವರದಿಯಿಂದ ಕೈಬಿಟ್ಟ ವಿಶ್ವಸಂಸ್ಥೆ
ಮಕ್ಕಳ ರಕ್ಷಣೆ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಗಣಿಸಿ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಮಕ್ಕಳ ಮೇಲಿನ ಶಸ್ತ್ರಾಸ್ತ್ರ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಿಂದ ಭಾರತವನ್ನು ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ: ವಿಶ್ವಸಂಸ್ಥೆಯಲ್ಲಿ ಪಾಕ್ ನ ಮುಖವಾಡ ಕಳಚಿದ ಭಾರತ!
ಡ್ರೋನ್‌ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದ್ದು ಇಂತಹ 'ಗಂಭೀರ ಸವಾಲು' ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಭಾರತ ಹೇಳಿದೆ.

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ.

ಲಿಂಗ ಸಮಾನತೆ ಸಾಧಿಸಲು 300 ವರ್ಷ ಬೇಕು: ವಿಶ್ವಸಂಸ್ಥೆ
ಲಿಂಗ ಸಮಾನತೆಯೆಡೆಗಿನ ಪ್ರಗತಿ “ನಮ್ಮ ಕಣ್ಣ ಮುಂದೆ ಕಣ್ಮರೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ.ಆಂಟೋನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತ
ಉಕ್ರೇನ್-ರಷ್ಯಾ ಯುದ್ದದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯ ತತ್ವಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ‘ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ಯನ್ನು ಆದಷ್ಟು ಬೇಗ ಸ್ಥಾಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದ್ದು, ಈ ನಿರ್ಣಯದಿಂದ ಭಾರತ ದೂರ ಉಳಿದಿದೆ.

ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ: ವಿಶ್ವಸಂಸ್ಥೆ ಘೋಷಣೆ
ಪ್ರಮುಖ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ(LeT)ದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಿದೆ. ಅಲ್ಲದೆ ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಆತನ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಪ್ರಯಾಣಕ್ಕೆ ನಿಷೇಧ ಹೇರಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಭಾರತಕ್ಕೆ ಫ್ರಾನ್ಸ್ ಬೆಂಬಲ, 3 ದೇಶಗಳ ಖಾಯಮತಿಗೆ ಬಿಗಿ ಪಟ್ಟು!
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡುವ ಕುರಿತು ಭಾರತಕ್ಕೆ ಫ್ರಾನ್ಸ್ ಬೆಂಬಲ ನೀಡಿದ್ದು, ಭಾರತ ಮಾತ್ರವಲ್ಲದೇ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ದೇಶಗಳ ಖಾಯಂ ಸದಸ್ಯ ಉಮೇದುವಾರಿಕೆಯನ್ನು ಫ್ರಾನ್ಸ್ ಬೆಂಬಲಿಸುತ್ತದೆ ಎಂದು ಹೇಳಿದೆ.

