ರಾಜ್ಯವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.