UP

ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆ
ಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಬಿಜೆಪಿ, ಕಾಂಗ್ರೆಸ್ ನಡುವೆ ಯಾವುದೇ ವ್ಯತ್ಯಾಸ ಇಲ್ಲ- ಅಖಿಲೇಶ್ ಯಾದವ್
ಸುಳ್ಳು ಹಾಗೂ ದ್ವೇಷವನ್ನು ಹರಡುತ್ತಾ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಜನರು ಮತ್ತೆ ವಂಚನೆಗೊಳಗಾಗದಂತೆ ಕರೆ ನೀಡಿದ್ದಾರೆ.

ಬಿಜೆಪಿ ಅಪಾಯಕಾರಿ ಅಂತಾ ಇಡೀ ವಿಶ್ವವೇ ಹೇಳುತ್ತಿದೆ- ಅಖಿಲೇಶ್ ಯಾದವ್
ಪ್ರಜಾಪ್ರಭುತ್ವಕ್ಕೆ ಬಿಜೆಪಿ ಆಡಳಿತ ಅಪಾಯಕಾರಿ ಅಂತಾ ಇಡೀ ವಿಶ್ವವೇ ಹೇಳುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಮೋದಿ ಒಡೆದು ಆಳುವುದಕ್ಕೆ ಪ್ರಯತ್ನ- ಮಾಯಾವತಿ
ಬಿಎಸ್ಪಿ ಹಾಗೂ ಎಸ್ಪಿ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಉಭಯ ಪಕ್ಷಗಳ ನಡುವಿನ ಮೈತ್ರಿ ಒಡೆಯದೆ ಶಾಶ್ವತವಾಗಿ ಉಳಿಯಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ರಾಷ್ಟ್ರದ ಭದ್ರತೆ ಕಾಪಾಡುವಲ್ಲಿ ಬಿಜೆಪಿ ವಿಫಲ- ಅಖಿಲೇಶ್ ಯಾದವ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರದ ಭದ್ರತೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಅಜಂಖಾನ್ 2 ದಿನ ಪ್ರಚಾರ ಮಾಡದಂತೆ ಚುನಾವಣಾ ಆಯೋಗದಿಂದ ನಿರ್ಬಂಧ
ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಚೋದನಕಾರಿ ಹೇಳಿಕ ನೀಡಿದ್ದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಎರಡು ದಿನಗಳ ಕಾಲ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧಿಸಿದೆ.

ಮೋದಿ ಸಿಎಂ ಆಗಿದ್ದಾಗ ಚುನಾವಣೆಯ ಲಾಭಕ್ಕಾಗಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ- ಮಾಯಾವತಿ
ಚುನಾವಣಾ ಲಾಭ ಪಡೆಯಲು ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವ ಮೂಲಕ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಹತ್ಯೆ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥ ಮಾಯಾವತಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಜಾತಿ ಕಾರ್ಡ್ ಪ್ರಯೋಗಿಸಿ ಹಣ ಲೂಟಿ ಮಾಡುವುದೇ ಎಸ್ಪಿ ಬಿಎಸ್ಪಿ-ಆರ್ ಎಲ್ ಡಿ ಮೈತ್ರಿ ಮಂತ್ರ- ಪ್ರಧಾನಿ ಮೋದಿ
ಜಾತಿ ಕಾರ್ಡ್ ಪ್ರಯೋಗಿಸಿ ಹಣ ಲೂಟಿ ಮಾಡುವುದೇ ಎಸ್ಪಿ- ಬಿಎಸ್ಪಿ ಹಾಗೂ ಆರ್ ಎಲ್ ಡಿ ಮೈತ್ರಿಯ ಮಂತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯತೆಯಿಂದ ಜನರ ಸಮಸ್ಯೆಗಳಿಗೆ ಪರಿಹಾರ- ಪ್ರಿಯಾಂಕಾ ಗಾಂಧಿ ವಾದ್ರಾ
ಜನರಿಗೆ ಶೂ, ಸೀರೆ, ಹಣ ವಿತರಣೆಗೆ ಸಂಬಂಧಿಸಿದಂತೆ ಅಮೇಥಿಯಲ್ಲಿನ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

