UP

ಲೋಕಸಭಾ ಚುನಾವಣೆ ಮುನ್ನ ರಾಮಮಂದಿರ ನಿರ್ಮಾಣ ಆರಂಭ - ರಾಮ್ ವಿಲಾಸ್ ವೇದಾಂತಿ
2019ರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮಾಜಿ ಬಿಜೆಪಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.

ಅಲಹಾಬಾದಿನಲ್ಲಿ 10 ರೂ. ಗೆ 'ಯೋಗಿ ಥಾಲಿ'
ಉತ್ತರ ಪ್ರದೇಶದ ಅಲಹಾಬಾದಿನಲ್ಲಿ 10 ರೂಪಾಯಿಗೆ ಕಡಿಮೆ ದರದಲ್ಲಿ ಊಟ , ಉಪಹಾರ ಒದಗಿಸುವ ಯೋಗಿ ಥಾಲಿ ಯೋಜನೆಗೆ ಮೇಯರ್ ಅಭಿಲಾಷ್ ಗುಪ್ತ ಚಾಲನೆ ನೀಡಿದ್ದಾರೆ.

ಎಮ್ಮೆ ಕಳ್ಳತನದ ಶಂಕೆ: 20 ವರ್ಷದ ಯುವಕನ ಮೇಲೆ ಸಾಮೂಹಿಕ ಹಲ್ಲೆ; ಹತ್ಯೆ
ದುಬೈ ನಿಂದ ಮನೆಗೆ ಬಂದಿದ್ದ 20 ವರ್ಷದ ಯುವಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಅಯೋಧ್ಯ ವಿವಾದ : ಸುಪ್ರೀಂಕೋರ್ಟ್ ನಿಂದ 'ಅನುಕೂಲಕರ' ತೀರ್ಪಿನ ಭರವಸೆ- ಮೌರ್ಯ
ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ವಿಳಂಬವಾಗುತ್ತಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅನುಕೂಲಕರ ತೀರ್ಪಿನ ಭರವಸೆ ವ್ಯಕ್ತಪಡಿಸಿದ್ದಾರೆ.

2019 ಲೋಕಸಭಾ ಚುನಾವಣೆ : ಉತ್ತರ ಪ್ರದೇಶದ 74 ಸ್ಥಾನಗಳಲ್ಲಿ ಬಿಜೆಪಿ ಗೆಲುವು -ಅಮಿತ್ ಶಾ
ಬಿಎಸ್ ಪಿ, ಎಸ್ ಪಿ, ಕಾಂಗ್ರೆಸ್ ಮಹಾಮೈತ್ರಿ ಮಾಡಿಕೊಂಡರೂ ಉತ್ತರ ಪ್ರದೇಶದಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಎನ್ ಆರ್ ಸಿ ಕರಡು ಬಗ್ಗೆ ರಾಹುಲ್ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ - ಅಮಿತ್ ಶಾ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಕರಡು ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟವಾಗಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಎಸ್ಪಿ ರಾಷ್ಟ್ರೀಯ ಕಾರ್ಯಕಾರಿಣಿ: ಲೋಕಸಭಾ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಖಿಲೇಶ್ ಗೆ ಅಧಿಕಾರ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು ಎಸ್ಪಿ ಮುಖಂಡ ರಾಮಗೋಪಾಲ್ ಯಾದವ್ ಹೇಳಿದ್ದಾರೆ.

ಗುಂಪು ಹಲ್ಲೆ ಪ್ರಕರಣಗಳಿಗೆ ಅನಗತ್ಯ ಪ್ರಾಮುಖ್ಯತೆ ನೀಡಲಾಗುತ್ತಿದೆ: ಯೋಗಿ ಆದಿತ್ಯನಾಥ್
ಗುಂಪು ಹಲ್ಲೆ ಪ್ರಕರಣಗಳಿಗೆ ಅನಗತ್ಯ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಾನವರಿಗೆ ಪ್ರಾಮುಖ್ಯತೆ ನೀಡಬೇಕು. ಆದರೆ, ಅದೇ ರೀತಿಯಲ್ಲಿ ಹಸುಗಳನ್ನು ಕಾಪಾಡಬೇಕಾದ ಅಗತ್ಯವಿದೆ ಎಂದಿದ್ದಾರೆ.

ಗಾಜಿಯಾಬಾದ್ ಕಟ್ಟಡ ಕುಸಿತ : ನಾಲ್ವರು ಶಂಕಿತರ ಪತ್ತೆ
ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಿನ್ನೆ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

