Upendra

ಉಪೇಂದ್ರ ನಟನೆಯ ಬಹುಭಾಷಾ ಸಿನಿಮಾ 'UI' ಡಬ್ಬಿಂಗ್ ಹಂತಕ್ಕೆ; ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧತೆ!
ಉಪೇಂದ್ರ ಅವರ ಬಹು ನಿರೀಕ್ಷಿತ ಪ್ಯಾನ್-ಇಂಡಿಯಾ 'UI' ಸಿನಿಮಾವನ್ನು ಚಿತ್ರತಂಡ ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದು, ಚಿತ್ರವು ಸದ್ಯ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದೆ.

ನಟ ಉಪೇಂದ್ರಗೆ ಬಿಗ್ ರಿಲೀಫ್: ಹಲಸೂರು ಗೇಟ್ ಪೊಲೀಸ್ ಠಾಣೆ FIR ಗೆ ಹೈಕೋರ್ಟ್ ಮಧ್ಯಂತರ ತಡೆ
ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ನಟ ಉಪೇಂದ್ರ, ಸಚಿವ ಮಲ್ಲಿಕಾರ್ಜುನ್ ವಿರುದ್ಧ ಜಾತಿ ನಿಂದನೆ ಆರೋಪ: ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ; ಗೃಹ ಸಚಿವ ಪರಮೇಶ್ವರ್
ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

'ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ: ದ್ವೇಷದ ಆಟಕ್ಕೆ ಹೈಕೋರ್ಟ್ ತಡೆ'
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಚಂದನ್ ಗೌಡರ್ ಅವರ ನೇತೃತ್ವದ ನ್ಯಾಯಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅಟ್ರಾಸಿಟಿ ಪ್ರಕರಣದಲ್ಲಿ ಉಪೇಂದ್ರಗೆ ಬಿಗ್ ರಿಲೀಫ್: ನಟನ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ
ನಟ, ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು ಬಂಧನ ಭೀತಿಯಿಂದ ನಟ ಪಾರಾಗಿದ್ದಾರೆ.

ಉಪೇಂದ್ರ ಮೊಬೈಲ್ ಸ್ವಿಚ್ ಆಫ್: ಬಂಧನ ಭೀತಿಯಿಂದ ನಾಪತ್ತೆ ಆದ್ರಾ ಸೂಪರ್ ಸ್ಟಾರ್?
ಫೇಸ್‌ಬುಕ್ ಲೈವ್‌ನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ನಟ ಉಪೇಂದ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಿಯಲ್ ಸ್ಟಾರ್ ಉಪ್ಪಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್
ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.

ಗಾದೆ ಮಾತು ತಂದ ಕುತ್ತು: ನಟ ಉಪೇಂದ್ರ ವಿರುದ್ಧ ಎರಡನೇ ಎಫ್ ಐಆರ್ ದಾಖಲು!
ಫೇಸ್‌ಬುಕ್ ಲೈವ್‌ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದ ಉಪೇಂದ್ರ, ಗಾದೆ ಮಾತೊಂದನ್ನು ಹೇಳಿದ್ದರು. ಇದೀಗ ಈ ಮಾತು ಒಂದು ಸಮುದಾಯದವರನ್ನು ಬಡಿದೆಬ್ಬಿಸಿದೆ. ಈ ಸಂಬಂಧ ನಟ- ನಿರ್ದೇಶಕ ಉಪೇಂದ್ರ ವಿರುದ್ಧ ಎರಡನೇ ಎಫ್ ಐ ಆರ್ ದಾಖಲಾಗಿದೆ.

ಆಕ್ಷೇಪಾರ್ಹ ಹೇಳಿಕೆ: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ನಟ, ಉತ್ತಮ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಅವರ ಹೇಳಿಕೆ ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು ಈ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಉಪೇಂದ್ರ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.

