ದೇಶಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ ಎಡಿಎಂಕೆ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ!
ಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಸಕ್ರಿಯ ರಾಜಕೀಯಕ್ಕ ಮರಳುವ ಸೂಚನೆ ಕೊಟ್ಟಿದ್ದಾರೆ. ವಿ ಕೆ ಶಶಿಕಲಾ ಮತ್ತು ಪಕ್ಷದ ಕ್ಯಾಡರ್ ಮಧ್ಯೆ ನಡೆದಿದೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು ಅದರಲ್ಲಿ ಕೋವಿಡ್ ಸಾಂಕ್ರಾಮಿಕ ತಗ್ಗಿದ ನಂತರ ರಾಜಕೀಯಕ್ಕೆ ಸಕ್ರಿಯವಾಗಿ ಮರಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.