ದೇಶದೇಶದ ಜನತೆ 4 ವಿಷಯಗಳಿಗೆ ಬದ್ಧರಾಗಿ, ಕೊರೋನಾ ಲಸಿಕೆ ಉತ್ಸವದಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ ಕರೆ
ದೇಶಾದ್ಯಂತ ಭಾನುವಾರದಿಂದ ಕೊರೋನಾ ಲಸಿಕೆ ಉತ್ಸವ ಆರಂಭವಾಗಲಿದೆ. ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೊರೋನಾ ೨ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 4 ದಿನಗಳ ಈ ಲಸಿಕಾ ಉತ್ಸವ ಆರಂಭಿಸಿದ್ದಾರೆ. ಈ ಮೂಲಕ ಎಲ್ಲಾ ರಾಜ್ಯಗಳಲ್ಲಿ ಲಸಿಕೆ ನೀಡುವ ಅಭಿಯಾನವನ್ನು ತೀವ್ರಗೊಳಿಸಲು ಅವರು ಕರೆ ಕೊಟ್ಟಿದ್ದಾರೆ.