Vaccine

ದೆಹಲಿಯಲ್ಲಿ ಎಲ್ಲಾ ಕೋವಿಡ್-19 ಪ್ರಕರಣಗಳ ಜಿನೋಮ್ ಸೀಕ್ವೆನ್ಸಿಂಗ್: ಎಲ್ಲಾ ಅರ್ಹರಿಗೂ ಕನಿಷ್ಟ 1 ಡೋಸ್ ಲಸಿಕೆ
ದೆಹಲಿಯಲ್ಲಿ ಎಲ್ಲಾ ಕೋವಿಡ್-19 ಪ್ರಕರಣಗಳ ಸ್ಯಾಂಪಲ್ ಗಳ ಜಿನೋಮ್ ಸೀಕ್ವೆನ್ಸಿಂಗ್ ನ್ನು ಪ್ರಾರಂಭಿಸಲಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಪಂಜಾಬ್ ಸರ್ಕಾರ
ಪಂಜಾಬ್ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಅಡಿಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಅವರ ಸಂಬಳವನ್ನು ಪಾವತಿಸಲಾಗುವುದಿಲ್ಲ ಎಂದು ಹೇಳಿದೆ.

ಮಕ್ಕಳಿಗೆ ಸದ್ಯಕ್ಕೆ ಕೋವಿಡ್-19 ಲಸಿಕೆ ಅಗತ್ಯವಿಲ್ಲ: ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮಾಹಿತಿ
ಈಗ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಗತ್ಯವಿಲ್ಲ ಎಂದು ದೇಶದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಸದಸ್ಯ ಡಾ. ಜಯ ಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ. ಮಕ್ಕಳು ಚೆನ್ನಾಗಿದ್ದು, ಅವರಿಗೆ ಈಗ ಲಸಿಕೆಯ ಅಗತ್ಯವಿಲ್ಲ ಎಂದು ಸಮಿತಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 7,145 ಹೊಸ ಕೇಸ್ ಪತ್ತೆ, 289 ಮಂದಿ ಸಾವು
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,145 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 289 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 18) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಗುರಿ ಸಾಧನೆ
ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 7,447 ಹೊಸ ಕೇಸ್ ಪತ್ತೆ, 391 ಮಂದಿ ಸಾವು
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,447 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 391 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 17) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 7,974 ಹೊಸ ಕೇಸ್ ಪತ್ತೆ, 343 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,974 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 343 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 6,984 ಹೊಸ ಕೇಸ್ ಪತ್ತೆ, 247 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 6,984 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 247 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯಗಳ ಬಳಿ ಬಳಕೆಯಾಗದ ಸುಮಾರು 17.06 ಕೋಟಿಗೂ ಅಧಿಕ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 17.06 ಕೋಟಿಗೂ ಹೆಚ್ಚು ಸಮತೋಲಿತ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್ ಈಗಲೂ ಲಭ್ಯವಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

