ದೇಶಲಖೀಂಪುರ್ ಖೇರಿ ಘಟನೆ: ಮಾಜಿ ಪ್ರಧಾನಿ ವಾಜಪೇಯಿಯ ಭಾಷಣದ ಕ್ಲಿಪ್ ಹಂಚಿಕೊಂಡ ವರುಣ್ ಗಾಂಧಿ
ರೈತರ ಧ್ವನಿಯನ್ನು ಅಡಗಿಸುತ್ತಿದ್ದ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡುತ್ತಾ, ರೈತರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ್ದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣದ ತುಣಕುವೊಂದನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.