ವಿದೇಶರಷ್ಯಾ ಯುದ್ಧದ ನಡುವೆ ಹೊಸ ಸೇನಾ ಮುಖ್ಯಸ್ಥರನ್ನು ನೇಮಿಸಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ
ರಷ್ಯಾ ಯುದ್ಧದ ಮಧ್ಯೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಉಕ್ರೇನ್ ಸೇನಾ ಮುಖ್ಯಸ್ಥ ವ್ಯಾಲೆರಿ ಜಲುಜ್ನಿ ಅವರನ್ನು ತೆಗೆದುಹಾಕಿ ಅವರ ಸ್ಥಾನಕ್ಕೆ ಗ್ರೌಂಡ್ ಫೋರ್ಸ್ ಕಮಾಂಡರ್ ಒಲೆಕ್ಸಾಂಡರ್ ಸಿರ್ಸ್ಕಿಯನ್ನು ನೇಮಿಸಿದ್ದಾರೆ.