ರಾಜ್ಯಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ
ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.