Vande Bharat Express

7 ನಗರ, 8 ಕಾರ್ಯಕ್ರಮ, 36 ಗಂಟೆಗಳಲ್ಲಿ ಪ್ರಧಾನಿ ಮೋದಿ 5300 ಕಿಮೀ ಯಾತ್ರೆ!
ಪ್ರಧಾನಿ ನರೇಂದ್ರ ಮೋದಿ ಸತತ 2 ದಿನಗಳ ಕಾಲ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, 7 ನಗರಗಳಲ್ಲಿ ನಡೆಯಲಿರುವ 8 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಸಮಾರಂಭ; ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್‌ರನ್ನು ಹೊಗಳಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು 'ಸ್ನೇಹಿತ' ಎಂದು ಕರೆದಿದ್ದಾರೆ. ರಾಜ್ಯದಲ್ಲಿ 'ರಾಜಕೀಯ ಜಗಳ' ನಡೆಯುತ್ತಿರುವಾಗಲೂ ಇಲ್ಲಿ ನಡೆದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಸಿಕಂದರಾಬಾದ್–ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.

ಬೆಂಗಳೂರಿನಲ್ಲಿ ಮತ್ತೆ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ
ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ (20607) ನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಹೊಸ ವಂದೇ ಭಾರತ್ ರೈಲು ಥಾಣೆಯಲ್ಲಿ ನಿಲುಗಡೆಗೆ ಸೇನಾ ಸಂಸದ ಒತ್ತಾಯ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿರುವ ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಥಾಣೆ ನಿಲ್ದಾಣದಲ್ಲಿ ನಿಲ್ಲಿಸಬೇಕು ಎಂದು ಶಿವಸೇನೆ-ಉದ್ಧವ್ ಬಾಲ್ ಠಾಕ್ರೆಯ ಸಂಸದ ರಾಜನ್ ವಿಚಾರೆ ಅವರು....

ಇದು ನಮ್ಮ ದೇಶದ ದುಸ್ಥಿತಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಸದ ರಾಶಿ, ಫೋಟೋ ವೈರಲ್!
ಆಧುನಿಕ ಹೈ-ಸ್ಪೀಡ್ ವಂದೇ ಭಾರತ್ ರೈಲುಗಳನ್ನು ಭಾರತದ ಪ್ರಮುಖ ನಗರಗಳ ನಡುವೆ ಓಡಿಸಲಾಗುತ್ತಿದೆ. ಇನ್ನು ವಿವಿಧ ರೈಲು ಮಾರ್ಗಗಳಲ್ಲಿ ರೈಲುಗಳ ಬಳಕೆಗೆ ಸರ್ಕಾರ ಕೆಲಸ ಮಾಡುತ್ತಿದೆ. ರೈಲು ಪ್ರಾರಂಭದಿಂದಲೂ ಒಂದಿಲ್ಲೊಂದು ವಿಷಯಗಳಿಂದ ಸುದ್ದಿಯಾಗುತ್ತಲೇ ಇದೆ.

ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ: ನಾಗ್ಪುರ-ಬಿಲಾಸ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್'ಗೆ ಚಾಲನೆ
ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾನುವಾರ ಚಾಲನೆ ನೀಡಿದರು.

ಗುಜರಾತ್: ಮತ್ತೆ ಹಸುಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್!
ಗಾಂಧಿನಗರ-ಮುಂಬೈ ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತೊಮ್ಮೆ ಹಸುವಿಗೆ ಡಿಕ್ಕಿ ಹೊಡೆದಿದೆ.

