Varanasi

ಪ್ರಧಾನಿ ಮೋದಿ ಯುಪಿ ಭೇಟಿ ವೇಳೆ ಭದ್ರತಾ ಲೋಪ; ಬೆಂಗಾವಲು ಪಡೆಯ ಮುಂದೆ ಹಾರಿ ಕೆಲಸ ಕೇಳಿದ ವ್ಯಕ್ತಿ ಬಂಧನ
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್
ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಜಿ-20 ಶೃಂಗಸಭೆಗೆ ಆಗಮಿಸಿದ್ದ ಮಾರಿಷಸ್ ಪ್ರಧಾನಿ ವಾರಣಾಸಿಗೆ ಭೇಟಿ
ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ವಿದೇಶಗಳ ನಾಯಕರ ಪೈಕಿ ಕೆಲವರು, ಇನ್ನೂ ಭಾರತ ಪ್ರವಾಸವನ್ನು ಮುಂದುವರೆಸಿದ್ದಾರೆ.

ಲೋಕಸಭಾ ಚುನಾವಣೆ: ವಾರಣಾಸಿಯಿಂದ ಪ್ರಿಯಾಂಕಾ ಕಣಕ್ಕಿಳಿಸಲು ಯುಪಿ ಕಾಂಗ್ರೆಸ್ ಉತ್ಸುಕ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಭಾನುವಾರ ಹೇಳಿದ್ದಾರೆ.

ಭಾರತದ ಮಂತ್ರ 'ವಿರಾಸತ್ ಭಿ, ವಿಕಾಸ್ ಭಿ'; ಜಿ20 ಸಂಸ್ಕೃತಿ ಸಚಿವರ ಕೆಲಸ ಇಡೀ ಮಾನವಕುಲಕ್ಕೆ ಮಹತ್ವ ಹೊಂದಿದೆ: ಪ್ರಧಾನಿ ಮೋದಿ
ಸಾಂಸ್ಕೃತಿಕ ಆಸ್ತಿಗಳ ಮರುಸ್ಥಾಪನೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮೂರ್ತ ಪರಂಪರೆ ಕೇವಲ ಭೌತಿಕ ಮೌಲ್ಯ ಮಾತ್ರವಲ್ಲ, ಅದು ರಾಷ್ಟ್ರದ ಇತಿಹಾಸ ಮತ್ತು ಗುರುತಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರಿಗೂ ಅವರ ಸಾಂಸ್ಕೃತಿಕ ಪರಂಪರೆಯನ್ನು ಆನಂದಿಸುವ ಹಕ್ಕಿದೆ ಎಂದು ಪ್ರತಿಪಾದಿಸಿದರು.

ಚಂದ್ರಯಾನ-3 ಯಶಸ್ಸಿಗೆ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ
ಚಂದ್ರಯಾನ-3 ಲ್ಯಾಂಡರ್ ತನ್ನ ಗಮ್ಯಸ್ಥಾನವನ್ನು ತಲುಪುತ್ತಿದ್ದಂತೆ, ಭಾರತದ ಮೂರನೇ ಚಂದ್ರಯಾನ ಕಾರ್ಯಾಚರಣೆಯ ಯಶಸ್ಸಿಗಾಗಿ ದೇಶದ ವಿವಿಧೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಗುತ್ತಿದೆ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಪ್ರತಿಪಾದಿಸಿದ್ದಾರೆ.

ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ಸರ್ವೆ ಇಲ್ಲ: ಅಲಹಾಬಾದ್ ಹೈಕೋರ್ಟ್
ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ವೈಜ್ಞಾನಿಕ ಸರ್ವೆ ನಡೆಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಗೋಲ್ವಾಲ್ಕರ್ ವಿರುದ್ಧ ಸೋಷಿಯಲ್ ಮೀಡಿಯಾ ಪೋಸ್ಟ್: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ದೂರು
ರಾಷ್ಟ್ರೀಯ ಸ್ವಯಂ ಸೇವಾ ಸಂಘ RSS ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ-ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

