ರಾಜ್ಯರಾಜ್ಯದಲ್ಲಿ ತಗ್ಗಿದ ಕೊರೋನಾತಂಕ: 3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ಪತ್ತೆಯಾಗದ ಹೊಸ ರೂಪಾಂತರಿ ವೈರಸ್!
ಸೋಂಕು ಇಳಿಕೆಯಾಗುತ್ತಿರುವ ನಡುವಲ್ಲೇ ರಾಜ್ಯದಲ್ಲಿ ದಿನ ಕಳೆಯುತ್ತಿದ್ದಂತೆಯೇ ಕೋವಿಡ್ ಕುರಿತಂತೆಯೂ ಆತಂಕ ಇಳಿಕೆಯಾಗುತ್ತಿದೆ. ಈ ನಡುವೆ ಇದಕ್ಕೆ ಉತ್ತಮ ಬೆಳವಣಿಗೆ ಎಂಬಂತೆ 3ನೇ ಸೆಟ್ ಜೀನೋಮಿಕ್ ಅನುಕ್ರಮ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಹೊಸ ರೂಪಾಂತರಿ ವೈರಸ್ ಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.