ರಾಜ್ಯವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್ಪಿಸಿಆರ್ ಶಿಫಾರಸು
ನಗರದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್ಪಿಸಿಆರ್) ಶಿಫಾರಸು ಮಾಡಿದೆ.