ರಾಜ್ಯವೀರಶೈವ ಲಿಂಗಾಯತ ನಿಗಮ ಸ್ಥಾಪನೆ: ಅಧಿವೇಶನ ಮುಗಿಯುವುದರೊಳಗೆ ತೀರ್ಮಾನ- ಶ್ರೀರಾಮುಲು
ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಬಗ್ಗೆ ಅಧಿವೇಶನ ಮುಗಿಯುವುದರೊಳಗೆ ಸಂಬಂಧಪಟ್ಟವರ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.