ಕ್ರಿಕೆಟ್ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಅರ್ಜಿ
ಹಲವು ತಿಂಗಳುಗಳಿಂದ ಖಾಲಿ ಉಳಿದಿರುವ ಟೀಂ ಇಂಡಿಯಾದ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಮತ್ತು ಮಾಜಿ ಕ್ರಿಕೆಟಿಗ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ.