ಬಾಲಿವುಡ್ಹಿರಿಯ ನಟಿ ವಹೀದಾ ರೆಹಮಾನ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟ!
ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ.