victoria hospital

ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆ ರಕ್ತದ ಕೊರತೆ: ರಕ್ತದಾನದ ಮೂಲಕ ಸಮಸ್ಯೆ ನಿವಾರಣೆಗೆ ಮುಂದಾದ ವೈದ್ಯರು!
ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ಮತ್ತೊಂದು ದಿಕ್ಕಿನಲ್ಲಿಯೂ ತಮ್ಮ ನಿರಂತರ ಹೋರಾಟ ನಡೆಸಿದ್ದಾರೆ. ವಿವಿಧ ರೋಗಿಗಳಿಗೆ ಎದುರಾಗುವ ರಕ್ತದ ಕೊರತೆಯನ್ನು ಸಹ ಅವರು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಮತ್ತೊಂದು 'ಪ್ಲಾಸ್ಮಾ ಥೆರಪಿ’ ಚಿಕಿತ್ಸೆ ಯಶಸ್ವಿ!
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದ ಬೆನ್ನಲ್ಲೇ ಬೆಂಗಳೂರು ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದ ಕೊರೋನಾ ರೋಗಿಯೊಬ್ಬ ಗುಣಮುಖರಾಗಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲಿ ಎರಡನೇ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾದಂತಾಗಿದೆ.

ಕೊರೋನಾ-19 ಒತ್ತಡ ದೂರಾಗಿಸಲು ನೃತ್ಯ ಮಾಡಿದ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು!
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಸೋಂಕಿತರಿಗೆ ಚಿಕಿತ್ಸೆ ನೀಡಿ ಒತ್ತಡಕ್ಕೊಳಗಾಗುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ಒತ್ತಡದಿಂದ ದೂರ ಉಳಿಯಲು ಹ್ಯಾಪಿ ಡ್ಯಾನ್ಸ್ ಮೊರೆ ಹೋಗಿದ್ದಾರೆ.

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ!
ಆಘಾತಕಾರಿ ಬೆಳವಣಿಗೆಯೊಂಡರಲ್ಲಿ ಕೊರೋನಾ ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಹಾರ ಹಾಗೂ ಔಷಧಿಗಳನ್ನು ನೀಡಲು ರೊಬೋಟ್ ನಿಯೋಜಿಸಿದೆ.

ಕೋವಿಡ್-19: ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಚಾಲನೆ
ಕೊರೋನಾ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಚಾಲನೆ ನೀಡಿದ್ದಾರೆ.

ಕೊರೋನಾ ವಿರುದ್ಧ ಹೋರಾಡಲು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರು
ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಕೊರೋನಾ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಸರ್ಕಾರ ಚಿಂತನೆ
ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಚಿಂತನೆ ಇದ್ದು, ಈ ಸಂಬಂಧ ಕ್ರಿಯಾಪಡೆ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆ ಓಡಾಟ: ಸಿಬ್ಬಂದಿ, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಕೊರೋನಾ ಸೋಂಕಿತ ಯುವತಿಯೊಬ್ಬಳು ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿ, ಆಸ್ಪತ್ರೆಯ ಸುತ್ತಮುತ್ತ ಓಡಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ.

