video viral

ಸಾರ್ವಜನಿಕವಾಗಿ ಮಹಿಳೆಗೆ ಕಪಾಳ ಮೋಕ್ಷ! ವಿಡಿಯೋ ವೈರಲ್, ಸಚಿವ ವಿ. ಸೋಮಣ್ಣ ವಿರುದ್ಧ ಭುಗಿಲೆದ್ದ ಆಕ್ರೋಶ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, 2 ಕಿಮೀ ದೂರ ಬೆತ್ತಲೆಯಾಗಿ ನಡೆದುಕೊಂಡು ಬಂದ ಸಂತ್ರಸ್ತೆ
15 ವರ್ಷದ ಬಾಲಕಿಯನ್ನು ಅಪಹರಿಸಿದ ಐವರು ವ್ಯಕ್ತಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮನೆಯನ್ನು ತಲುಪಲು ಮೊರಾದಾಬಾದ್-ಠಾಕುರ್ದ್ವಾರಾದಲ್ಲಿ ಸುಮಾರು ಎರಡು ಕಿಲೋಮೀಟರ್ ವರೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಸ್ತೆಯಲ್ಲಿ ಜಗಳವಾಡುತ್ತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಕಾರು: ಮುಂದೇನಾಯ್ತು! ಭಯಾನಕ ವಿಡಿಯೋ
ರಸ್ತೆಯಲ್ಲಿ ಜಗಳವಾಡುತ್ತಿದ್ದ ಯುವಕರಿಗೆ ಹಿಂದಿನಿಂದ ಸ್ಪೀಡಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮೇಲೆ ಬಿದ್ದ ಇಬ್ಬರು ಯುವಕರು ಸ್ವಲ್ವ ದೂರ ಸಾಗಿ, ಕೆಳಗೆ ಬಿದ್ದಿದ್ದಾರೆ. ಅದಾಗ್ಯೂ, ತಮ್ಮ ಹೊಡೆದಾಟವನ್ನು ಮುಂದುವರೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ದಲಿತ ಯುವಕನಿಗೆ ಚಪ್ಪಲಿಯಿಂದ ಥಳಿತ; ಇಬ್ಬರ ವಿರುದ್ಧ ಪ್ರಕರಣ ದಾಖಲು: ಓರ್ವನ ಬಂಧನ
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ದಲಿತ ಯುವಕನೊಬ್ಬನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉಡುಪಿ: ಹುಲಿವೇಷಧಾರಿಯೊಂದಿಗೆ ಮುದ್ದಾದ ಬಾಲೆಯ ಸಖತ್ ಸ್ಟೆಪ್; ವಿಡಿಯೋ ವೈರಲ್
ಹುಲಿವೇಷಧಾರಿಯೊಂದಿಗೆ ಮುದ್ದಾದ ಪುಟ್ಟ ಬಾಲಕಿಯೊಬ್ಬಳ ಆಕರ್ಷಕ ನೃತ್ಯದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!
ಚೀನಾದ ಟ್ಯಾಂಗ್‌ಶಾನ್ ನಗರದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಪುರುಷರು ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.

ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್
ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ.

ಸಿಎಂ ಇಬ್ರಾಹಿಂ- ಸಿದ್ದರಾಮಯ್ಯ ಮಾತಿನ ಚಕಮಕಿ ಕುರಿತ ಬಿಜೆಪಿ ವಿಡಿಯೋ ವೈರಲ್!
ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್'ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೈಲಿನಲ್ಲಿರುವ ಮಗನ ಬಗ್ಗೆ ಕೇಳಿದ ವರದಿಗಾರರನ್ನು ನಿಂದಿಸಿದ ಕೇಂದ್ರ ಸಚಿವ ಅಜಯ್ ಮಿಶ್ರಾ, ವಿಡಿಯೋ ವೈರಲ್
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಪುತ್ರನ ಬಗ್ಗೆ ಮಾಧ್ಯಮದವರು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕೇಳಿದ್ದಾರೆ.

