video

ಭಾನುವಾರದ ಸ್ಪೆಷಲ್ 'ಚಂಪಾರಣ್ ಮಟನ್' ರೆಸಿಪಿ ತಯಾರಿಸಿದ ರಾಹುಲ್ ಗಾಂಧಿ-ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರದ ಸ್ಪೆಷಲ್ ಚಂಪಾರಣ್ ಮಟನ್' ರೆಸಿಪಿ ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಮಾರ್ಗದರ್ಶನದಲ್ಲಿ ಚಂಪಾರಣ್ ಮಟನ್ ಅಡುಗೆ ಮಾಡಿ ಉಣಬಡಿಸಿದ್ದಾರೆ.

ಚಂದ್ರನ ಮೇಲೆ ಲ್ಯಾಂಡರ್‌ನಿಂದ ರೋವರ್ ಪ್ರಗ್ಯಾನ್ ಹೊರಡುವ ವಿಡಿಯೊ ಬಿಡುಗಡೆ ಮಾಡಿದ ಇಸ್ರೊ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ, ಭಾರತದ ರೋಬೋಟ್‌ಗಳಾದ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಮೇಲ್ಮೈಯಿಂದ ತೆಗೆದ ಮೊದಲ ಸೆಲ್ಫಿಗಳನ್ನು ಹಂಚಿಕೊಳ್ಳುವುದರೊಂದಿಗೆ ಶತಕೋಟಿ ಭಾರತೀಯರು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಕ್ಷಣವು ಕೊನೆಗೂ ಬಂದಿದೆ.

ಮಧ್ಯಪ್ರದೇಶ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೊ: ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿರುವ ಪ್ರಕರಣ ಈಗ ವಿವಿಧ ರೂಪ ಪಡೆದುಕೊಳ್ಳುತ್ತಿದ್ದು ಪ್ರಕರಣ ಬಿಗಡಾಯಿಸುತ್ತಿದೆ.

ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ! ಭಯಾನಕ ವಿಡಿಯೋ
ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.

ಮರ್ಯಾದಾ ಹತ್ಯೆ: ಸಹೋದರಿಯನ್ನು ಕೊಂದು, ಕತ್ತರಿಸಿದ ರುಂಡ ಹಿಡಿದು ನಡೆದ ಅಣ್ಣನ ಭಯಾನಕ ವಿಡಿಯೋ
ಪುರುಷನೊಬ್ಬ ಮಹಿಳೆಯ ಕತ್ತರಿಸಿದ ರುಂಡದೊಂದಿಗೆ ನಡೆದುಕೊಂಡು ಹೋಗುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಿಯಾಜ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಾರ್ಯಾದಾ ಹತ್ಯೆ ಎನ್ನಲಾಗಿದೆ.

'ನನ್ನ ಹೃದಯ ನೋವು ತುಂಬಿ ಸಿಟ್ಟಿನಿಂದ ಕುದಿಯುತ್ತಿದೆ, ತಪ್ಪಿತಸ್ಥರನ್ನು ಬಿಡುವುದಿಲ್ಲ': ಮಣಿಪುರ ಮಹಿಳೆಯರ ಬೆತ್ತಲೆ ಪರೇಡ್ ಬಗ್ಗೆ ಪ್ರಧಾನಿ ಆಕ್ರೋಶ
ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಮೊಬೈಲ್ ಗೀಳು: ಪೋಷಕರು ಗದರಿದ್ದಕ್ಕೆ ಜಲಪಾತಕ್ಕೆ ಹಾರಿದ ಬಾಲಕಿ- ವಿಡಿಯೋ ವೈರಲ್
ಸದಾ ಮೊಬೈಲ್ ಹಿಡಿದುಕೊಂಡು ಅದರಲ್ಲೇ ಮುಳುಗಿ ಹೋಗುತ್ತಿರುವ ಮಕ್ಕಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಮೊಬೈಲ್ ಗೀಳು ಕೆಲವೊಮ್ಮೆ ಪ್ರಾಣಕ್ಕೂ ಕುತ್ತು ತರುವ ಮಟ್ಟಿಕ್ಕೂ ಕಾರಣವಾಗುತ್ತಿದೆ.

