video

ಹೈದ್ರಾಬಾದ್: ಇದಕ್ಕಿದ್ದಂತೆ ಧಗಧಗನೆ ಹೊತ್ತಿ ಉರಿದ ಬಸ್! ವಿಡಿಯೋ
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಬಸ್ ವೊಂದಕ್ಕೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಹೊತ್ತಿ ಉರಿದಿದೆ. ಟಿಎಸ್ ಆರ್ ಟಿಸಿ ಬಸ್ ನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ ನಲ್ಲಿ ಸುಮಾರು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರ: ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗ- ವಿಡಿಯೋ
ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿದೆ. ಇಂದು ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೋದಿ, ಅಮಿತ್ ಶಾ ಕುರಿತಾದ ವ್ಯಂಗ್ಯವಾಡುವ ವಿಡಿಯೋ ಹಂಚಿಕೊಂಡ ಕಾಂಗ್ರೆಸ್; ರಾಹುಲ್ ಗಾಂಧಿ ಬಗ್ಗೆ ಹೇಳಿದ್ದೇನು?
ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' ನೊಂದಿಗೆ ಬದಲಾಯಿಸುತ್ತಿದ್ದಾರೆ ಎಂಬ ಸಂದೇಶ ಸಾರಿದೆ.

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯದ ವಿಡಿಯೋ ಸೆರೆ ಹಿಡಿದಿದ್ದ ವಿದ್ಯಾರ್ಥಿ ಬಂಧನ
ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯಕ್ಕೆ ತೆರಳಿದ ಮಹಿಳೆಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಹಾದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಟ್ರಕ್ ಯಾತ್ರೆ ಯಲ್ಲಿ ಚಾಲಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ- ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ರಾತ್ರಿ ಟ್ರಕ್ ನಲ್ಲಿ ಪ್ರಯಾಣಿಸಿದ್ದು, ಚಾಲಕರ ಕುಂದುಕೊರತೆ ಆಲಿಸಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಚಂಡೀಘಡಕ್ಕೆ ಪ್ರಯಾಣಿಸಿರುವ ರಾಹುಲ್ ಗಾಂಧಿ, ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.

ಜೋಡಿಯ ಲಿಪ್‌ಲಾಕ್ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿ
ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್‌ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿದ್ದು-ಡಿಕೆಶಿ ಆತ್ಮೀಯ ಮಾತುಕತೆ: ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್!
ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಎಲ್ಲಾ ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಂಬಿಸುವ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದೆ.

ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋ
ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ.

