video

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಎಚ್ಚರಿಕೆ ನೀಡಿದ್ದಾರೆ.

ಅಚ್ಚ ಕನ್ನಡದಲ್ಲಿ ಕೋವಿಡ್ ಜಾಗೃತಿ ಸಂದೇಶ ನೀಡಿದ ನಟ ಜ್ಯೂನಿಯರ್ ಎನ್ ಟಿಆರ್, ವಿಡಿಯೋ
ಬಹು ನಿರೀಕ್ಷಿತ ಆರ್ ಆರ್ ಆರ್ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಾಣಿಸಿಕೊಂಡಿರುವ ನಟಿ ಆಲಿಯಾ ಭಟ್, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್ ಟಿಆರ್, ಅಜಯ್ ದೇವಗನ್ ಹಾಗೂ ನಿರ್ದೇಶಕ ಎಸ್ ಎಸ್ ರಾಜಮೌಳಿ ಎಲ್ಲರೂ ಒಟ್ಟಾಗಿ ಕೋವಿಡ್-19 ನಿಯಂತ್ರಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಿಲಿಕಾನ್ ಸಿಟಿ ಪೊಲೀಸರಿಂದ ಕೋವಿಡ್-19 ಜಾಗೃತಿ ವಿಡಿಯೋ ಬಿಡುಗಡೆ
ದಿನೇ ದಿನೇ ಕೊರೊನಾ ಎರಡನೇ ಅಲೆ ತನ್ನ ಬಾಹು ಹೆಚ್ಚಿಸಿಕೊಳ್ಳುತ್ತಲೇ ಇದೆ. ಹೀಗಾಗಿ ಈ ಕುರಿತು ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ಕೋರಿ ನಗರ ಕಮಿಷನರೇಟ್ ವತಿಯಿಂದ ವಿಡಿಯೋ ಒಂದು ಬಿಡುಗಡೆ ಮಾಡಲಾಗಿದೆ.

ಪ್ರತಿಯೊಬ್ಬರು ಮನೆಯಲ್ಲಿಯೇ ಇರಿ ಎಂದ ಆರ್ ಸಿಬಿ ಬಾಯ್ಸ್ -ವಿಡಿಯೋ
ಕೋವಿಡ್-19 ಎರಡನೇ ಅಲೆ ದೇಶಾದ್ಯಂತ ವ್ಯಾಪಿಸಿರುವಂತೆಯೇ ಮಾರಕ ಕೊರೋನಾವೈರಸ್ ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಮನೆಯಲ್ಲಿಯೇ ಇರುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮನವಿ ಮಾಡಿಕೊಂಡಿದ್ದಾರೆ.

ಐಪಿಎಲ್ 2021: ಕೋಪದಲ್ಲಿ ಕುರ್ಚಿ ಹೊಡೆದುರುಳಿಸಿದ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಕೋಪದಲ್ಲಿ ಕುರ್ಚಿ ಹೊಡೆದುರುಳಿಸಿದ್ದಾರೆ.

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು- ವಿಡಿಯೋ
ಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್
ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಹಂಪಿಯಲ್ಲಿ ಜೋಡಿಯ ಪ್ರಿ ವೆಡ್ಡಿಂಗ್ ಫೋಟೋ-ವಿಡಿಯೊ ಶೂಟ್: ಸಾರ್ವಜನಿಕರ ತೀವ್ರ ಆಕ್ರೋಶ
ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚೆಗೆ ಲೇಟೆಸ್ಟ್ ಟ್ರೆಂಡ್. ಮದುವೆಯಾಗಲು ಹೊರಟಿರುವ ಜೋಡಿಯೊಂದು ವಿಶ್ವಪ್ರಸಿದ್ಧ ಪರಂಪರೆ ತಾಣ ಹಂಪಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೋ, ವಿಡಿಯೊ ಶೂಟ್ ಮಾಡಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ವಾಹನ ಸವಾರರ ಪರದಾಟ-ವಿಡಿಯೋ
ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

