Vijay Mallya

ದಿವಾಳಿತನ ಅರ್ಜಿ: ಯುಕೆ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯಗೆ ಹಿನ್ನಡೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟವು ವಿಜಯ್ ಮಲ್ಯ ಅವರ ಈಗ ಕಾರ್ಯನಿರ್ವಹಿಸದ ಕಿಂಗ್‌ಫಿಶರ್ ಏರ್‌ಲೈನ್ಸ್ ಸಾಲವನ್ನು ವಸೂಲಿ ಮಾಡುವ ಪ್ರಯತ್ನದಲ್ಲಿ ಒಂದು ಹೆಜ್ಜೆ ಹತ್ತಿರದಲ್ಲಿದೆ.

ಫ್ರಾನ್ಸ್ ನಲ್ಲಿ ಮಲ್ಯಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಅಕ್ರಮ ಹಣ ವರ್ಗಾವಣೆ ಕಾನೂನಿನಡಿಯಲ್ಲಿ ಫ್ರಾನ್ಸ್ ನಲ್ಲಿ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ಮಲ್ಯ ಗಡಿಪಾರು: 6 ವಾರಗಳಲ್ಲಿ ಸ್ಥಿತಿ ವರದಿ ಸಲ್ಲಿಸಲು ಸುಪ್ರೀಂ ಸೂಚನೆ
ಮಲ್ಯ ಗಡಿಪಾರು ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು 6 ವಾರಗಳಲ್ಲಿ ಸಲ್ಲಿಸುವತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಲಂಡನ್ ನಲ್ಲಿ ರಹಸ್ಯ ವಿಚಾರಣೆಗಳಿಂದಾಗಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ ವಿಳಂಬ: ಸುಪ್ರೀಂ ಕೋರ್ಟ್ ಗೆ ಎಂಇಎ ಮಾಹಿತಿ
ಬ್ರಿಟನ್ ನ ಉನ್ನತ ನ್ಯಾಯಾಲಯದ ಆದೇಶದ ಹೊರತಾಗಿಯೂ ಸಹ ಸುಸ್ತಿದಾರ ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆ ಇನ್ನೂ ಜಾರಿಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಮದ್ಯದ ದೊರೆಗೆ ಭಾರೀ ಹಿನ್ನೆಡೆ: ಸುಪ್ರೀಂ ಕೋರ್ಟ್ ನಲ್ಲಿ ವಿಜಯ್ ಮಲ್ಯ ಮನವಿ ವಜಾ
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪಲಾಯನಗೈದ ಉದ್ಯಮಿ ವಿಜಯ್ ಮಲ್ಯ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮಲ್ಯ ಮೇಲ್ಮನವಿ ಅರ್ಜಿ: ಇದೇ ತಿಂಗಳ 20 ರಂದು ಸುಪ್ರೀಂನಲ್ಲಿ ವಿಚಾರಣೆ
ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.

ಕೊನೆ ಕ್ಷಣದಲ್ಲಿ ಮತ್ತೊಂದು ಕಾನೂನು ತೊಡಕು, ವಿಜಯ್ ಮಲ್ಯ ಹಸ್ತಾಂತರ ಮರಿಚಿಕೆ?
ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು ನಿನ್ನೆ ರಾತ್ರಿಯೇ ಭಾರತಕ್ಕೆ ಬಂದಿಳಿಯಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮತ್ತೊಂದು ಕಾನೂನು ತೊಡಕು ಸೃಷ್ಟಿಯಾಗಿದ್ದು ಅದು ಬಗೆಹರಿಯುವವರೆಗೂ ಮಲ್ಯ ಹಸ್ತಾಂತರ ಸಾಧ್ಯವಿಲ್ಲ ಎಂದು ಬ್ರಿಟಿಷ್ ಹೈ ಕಮಿಷನ್ ಮೂಲಗಳು ತಿಳಿಸಿವೆ.

ವಿಜಯ್ ಮಲ್ಯಗೆ ಕಷ್ಟಕಾಲ ಶುರು: ಇಂದು ರಾತ್ರಿಯೇ ಮುಂಬೈಗೆ ಬಂದಿಳಿಯುವ ಸಾಧ್ಯತೆ!
ಬರೋಬ್ಬರಿ 9 ಸಾವಿರ ಕೋಟಿ ಸಾಲ ಪಡೆದು ವಂಚಿಸಿ ಇಂಗ್ಲೆಂಡ್ ಗೆ ಪರಾರಿಯಾಗಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಯಾವುದೇ ಕ್ಷಣದಲ್ಲಾದರೂ ಮುಂಬೈಗೆ ಬಂದಿಳಿಯುವ ಸಾಧ್ಯತೆ ಇದೆ.

ಭಾರತದಲ್ಲಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಮದ್ಯದ ದೊರೆ ವಿಜಯ್ ಮಲ್ಯ ಹೊಸ ಬ್ರಹ್ಮಾಸ್ತ್ರ!
ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದ ಪ್ರಕರಣದಲ್ಲಿ ಕಾನೂನಾತ್ಮಕ ಹೋರಾಟದ ಎಲ್ಲ ಮಾರ್ಗಗಳು ಕೊನೆಗೊಂಡಿರುವ ಹಿನ್ನಲೆಯಲ್ಲಿ ಮದ್ಯ ಉದ್ಯಮಿ ವಿಜಯ್ ಮಲ್ಯ ಅಂತಿಮವಾಗಿ ಬ್ರಹ್ಮಾಸ್ತ್ರ ಬಳಸಲು ಮುಂದಾಗುತ್ತಿದ್ದಾರೆ.

