Vijayanagara

ಹಂಪಿ: ಪ್ರವಾಸಕ್ಕೆ ಹೊರಟಿದ್ದ ವಿಂಟೇಜ್ ಕಾರು ಮಾರ್ಗ ಮಧ್ಯೆ ಹೇಗೆ ಹೊತ್ತಿ ಉರಿಯಿತು ನೋಡಿ...
ಬೆಂಕಿಗೆ ಆಹುತಿಯಾದ ಕಾರು ಹಿಂದೆ ಇತ್ತು. ರಾಯರಕೆರೆ ಸಮೀಪಕ್ಕೆ ಬಂದಾಗ ಬೆಳಗ್ಗೆ 9 ಗಂಟೆ ವೇಳೆಗೆ ಕಾರಿಗೆ ಒಮ್ಮಿಂದೊಮ್ಮೆಲೆ ಬೆಂಕಿ ಹತ್ತಿಕೊಂಡಿತು.

ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ 8 ತಿಂಗಳ ಮಗು ಸೇರಿ ಐವರು ಸಾವು!
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಬುಧವಾರ ಗ್ರಾಮಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಸೋಮವಾರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಕಲುಷಿತ ನೀರಿನ ಸಮಸ್ಯೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಎದುರಿಸಿದರು.

ಕಲುಷಿತ ನೀರು ಸೇವನೆ, ವಿಜಯನಗರ- ತುಮಕೂರಿನಲ್ಲಿ ಒಟ್ಟು ನಾಲ್ವರ ಸಾವು
ತುಮಕೂರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ರತ್ನಮ್ಮ ಅವರ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ತುಂಗಭದ್ರಾ ಬಳಿಕ ಮಾಲವಿ ಜಲಾಶಯದ ಒಡ್ಡು ಒಡೆದು ನೀರು ಪೋಲು...!
ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮಾಲವಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದಬಂದಿದ್ದು, ಜಲಾಶಯದ 9ನೇ ಗೇಟ್ ದುರಸ್ತಿಯಾಗದೆ, ನೀರು ಸಂಗ್ರಹಣೆಗೆ ಹಾಕಲಾಗಿದ್ದ ಒಡ್ಡು ಒಡೆದಿದೆ.

ಪ್ರಧಾನಿ ಮೋದಿಯವರ ಹಠದಿಂದಾಗಿ, ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಬಿಜೆಪಿಯ 25 ಸಂಸದರಿದ್ದರೂ ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ಕೇಳುತ್ತಿಲ್ಲ. ಬರ ಪರಿಹಾರಕ್ಕೆ ಒತ್ತಾಯಿಸುತ್ತಿಲ್ಲ. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಹಣ ನೀಡಲಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳನ್ನು ಹತ್ತಿಕ್ಕುವ ಪ್ರಯತ್ನವಾಗುತ್ತಿದೆ. ಮೋದಿಯವರ ಹಠದಿಂದಾಗಿ ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು

ವಿಜಯನಗರ: ಹಂಪಿ ದೇವಸ್ಥಾನದ ಕಲ್ಲಿನ ಕಂಬ ವಿರೂಪ ಪ್ರಕರಣ; ಗುಮಾಸ್ತ ಅಮಾನತು
ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯಲ್ಲಿರುವ ಐತಿಹಾಸಿಕ ವಿರೂಪಾಕ್ಷ ದೇವಾಲಯದೊಳಗಿನ ಕಂಬವನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದೇವಾಲಯದ ಗುಮಾಸ್ತರನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಹೊಸಪೇಟೆ: ಚರಂಡಿಗೆ ಬಿದ್ದ ಮಗು ಸಾವು, ಪಾಲಿಕೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್
ತೆರೆದ ಚರಂಡಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ವಿಜಯನಗರ ಜಿಲ್ಲೆಯಲ್ಲಿ ತೀವ್ರ ಬರಗಾಲ: ಕೆಲಸ ಹುಡುಕಿಕೊಂಡು ಬೇರೆಡೆಗೆ ತಾಂಡಾ ನಿವಾಸಿಗಳ ವಲಸೆ!
ವಿಜಯನಗರ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಬರಗಾಲ ಇಲ್ಲಿನ ತಾಂಡಾ ನಿವಾಸಿಗಳು ಉದ್ಯೋಗ ಹುಡುಕಿಕೊಂಡು ಬೇರೆ ನಗರಗಳಿಗೆ ಒತ್ತಾಯಪೂರ್ವಕವಾಗಿ ವಲಸೆ ಹೋಗುವಂತೆ ಮಾಡಿದೆ.

ಮಾತು ಕೇಳದ ಮಕ್ಕಳ ಮೇಲೆ ಹಲ್ಲೆ, ತಾಯಿ ಆತ್ಮಹತ್ಯೆ: ಪುತ್ರಿ ಸಾವು, ಗಂಭೀರ ಸ್ಥಿತಿಯಲ್ಲಿ ಮಗ!
ಹೆತ್ತ ತಾಯಿಯೇ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಹರಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.

