Vijayapura

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಮತ್ತು ಪತ್ನಿ ಸಾವು
ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಪಿಐ ರವಿ ಉಕ್ಕುಂದ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ದಂಪತಿ ದಾರುಣ ಸಾವು, 9 ಮಂದಿಗೆ ಗಾಯ
ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಕೃಷ್ಣಾ ನದಿಗೆ ಬಿದ್ದು ಮಹಿಳೆ ಆತ್ಮಹತ್ಯೆ; ಕೊಲ್ಹಾರ್ ಟೌನ್ ನಲ್ಲಿ ಘಟನೆ!
ಗುರುತು ತಿಳಿಯದ ಮಹಿಳೆಯೊಬ್ಬರು ಕೃಷ್ಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದಲ್ಲಿ ಭೀಕರ ಅಪಘಾತ: ಕೆಎಸ್ಆರ್ ಟಿಸಿ ಬಸ್-ಕಾರು ಢಿಕ್ಕಿ, ಇಬ್ಬರು ಸಾವು!
ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಪೇದೆ ಅಮಾನತು
ಪೊಲೀಸರನ್ನು ನಿಂದಿಸುವ ನೀನು ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಫೇಸ್‌ಬುಕ್‌ನಲ್ಲಿ ಸವಾಲು ಹಾಕಿದ್ದ ವಿಜಯಪುರದ ಪೊಲೀಸ್ ಪೇದೆ...

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; 72 ಗಂಟೆಗಳ ಅವಧಿಯಲ್ಲಿ ನಾಲ್ಕು ಬಾರಿ ಭೂಕಂಪನ
ಕಳೆದ 72 ಗಂಟೆಗಳಿಂದ ವಿಜಯಪುರ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯ ಜತೆಗೆ ಭೂಕಂಪನವೂ ಹೆಚ್ಚುತ್ತಿದೆ. 72 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕಡಿಮೆ ತೀವ್ರತೆಯ ನಾಲ್ಕು ಭೂಕಂಪಗಳು ವರದಿಯಾಗಿವೆ.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ವೇಳಾಪಟ್ಟಿ ಬಿಡುಗಡೆ, ಅ.28ರಂದು ಮತದಾನ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ಮತ್ತು 31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ವಿಜಯಪುರದಲ್ಲಿ ವರುಣನ ರುದ್ರ ನರ್ತನ, ಜನಜೀವನ ಅಸ್ತವ್ಯಸ್ತ, ಅಪಾರ ಪ್ರಮಾಣದ ಬೆಳೆ ಹಾನಿ; ಚಿಕ್ಕಮಗಳೂರಿನ ಭಾರೀ ಮಳೆ, ಮುಳುಗಿದ ಸೇತುವೆಗಳು
ಕರುನಾಡಲ್ಲಿ ವರುಣನ ಅಬ್ಬರ ಜೋರಾಗಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲೂ ಮಳೆಯ ಅವಾಂತರ ಮುಂದುವರೆದಿದೆ. ತಾಳಿಕೋಟೆ ತಾಲೂಕಿನ ಹಲವಾರು ಕಡೆ ಉತ್ತಮ ಮಳೆಯಾಗಿದೆ.

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು
ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

